ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಸನ ಮುಜಾವರ ಅವರನ್ನು ಸನ್ಮಾನಿಸಿದ ಉಸ್ತುವಾರಿ ಸಚಿವರು

ಇಂಡಿ: ಪಟ್ಟಣದ ಸಮಾಜ ಸೇವಕ ಹಸನ ಮುಜಾವರ ಅವರ ಕೊರೊನ ಸಂದರ್ಭದಲ್ಲಿ ಸಲ್ಲಿಸಿದ ಅನುಪಮ ಸೇವೆ, ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಉಚಿತವಾಗಿ ದಿನನಿತ್ಯದ ವಸ್ತುಗಳ ವಿತರಣೆ, ಹಾಸಿಗೆ-ಹೊದಿಕೆಗಳ ಉಚಿತ ವಿತರಣೆ ಜೊತೆಗೆ ಅನೇಕ ಸಾಮಾಜಿಕ ಉಪಯುಕ್ತ ಕಾರ್ಯವನ್ನು ಪರಿಗಣಿಸಿ ಕರ್ನಾಟಕ ರಕ್ಷಣಾ ವೇದಿಕೆ ವಿಜಯಪುರ ಘಟಕದಿಂದ ವಿಜಯಪುರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ ಬಿ ಪಾಟೀಲ ಅವರು ಹಸನ ಮುಜಾವರ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ, ಸಂಗಮೇಶ ಬಬಲೇಶ್ವರ,
ಮಹಾನಗರ ಪಾಲಿಕೆ ಅಧಿಕಾರಿ ಸೌದಾಗರ, ರಫೀಕ್ ಟಪಾಲ್ ಇಂಜಿನಿಯರ್,ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಎಂ ಸಿ ಮುಲ್ಲಾ,ನಗರ ಘಟಕದ ಅಧ್ಯಕ್ಷ ಫಯಾಜ್ ಕಲಾದಗಿ, ಜಿ ಓ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಅಲ್ಲಾಭಕ್ಷ ವಾಲೀಕಾರ, ದಸ್ತಗೀರ್ ಸಾಲೋಟಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ. ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ