ಕಲ್ಬುರ್ಗಿ:ರೈತರ ಕೊಳವೆ ಬಾವಿಯ ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತರೇ ಬರಿಸಬೇಕೆಂಬ ಆದೇಶವನ್ನು ಹಿಂಪಡೆಯಬೇಕು ಹಿಗಾಗಲೇ ಕರ್ನಾಟಕ ರಾಜ್ಯದಲ್ಲಿ ಬರದ ಭವಣೆಯಿಂದ ಸಾಲದ ಸುಳಿಗೆ ಸಿಕ್ಕು ರೈತರು ತತ್ತರಿಸಿ ಹೋಗಿದ್ದಾರೆ ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತರೆ ಬರಿಸಬೇಕೆಂಬುದು ಇದು ಯಾವ ನ್ಯಾಯ ಕೂಡಲೇ ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು ಒಂದು ವೇಳೆ ಆದೇಶ ಸರ್ಕಾರ ಹಿಂಪಡೆಯದಿದ್ದರೆ ರೈತರು ಬೆಳೆದ ಬೆಳೆ ತರಕಾರಿ ದರ ಹತ್ತು ಪಟ್ಟು ಸರ್ಕಾರ ಹೆಚ್ಚು ಮಾಡಬೇಕಾಗುತ್ತದೆ ಇದಕ್ಕೆ ಸರ್ಕಾರವೇ ನೇರ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ರೈತ ಮುಖಂಡ ಶರಣಗೌಡ ಬಿ ಪೊಲೀಸ್ ಪಾಟೀಲ್ ಮಲ್ಲಾಬಾದ್ ಅವರು ಸರಕಾರದ ವಿರುದ್ಧ ಗುಡುಗಿದ್ದಾರೆ ಅದೇ ರೀತಿಯಾಗಿ ರಾಜ್ಯ ಸರ್ಕಾರದ ಇಂಧನ ಇಲಾಖೆ ಹೊರಡಿಸಿದ ಆದೇಶವನ್ನು ರೈತರ ಪಂಪಸೆಟಗಳಿಗೆ ಹಾಗೂ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತನೇ ಬರಿಸಬೇಕೆಂಬ ಆದೇಶವನ್ನು ಕೂಡಲೇ ಸರ್ಕಾರ ಹಿಂಪಡೆಯಬೇಕು ಈ ಮುಂಚೆ ಇದ್ದಂತಹ ಆದೇಶವನ್ನು ಮಾಡಬೇಕು ಈಗಾಗಲೇ ರೈತರು ಬರದಿಂದ ಕಷ್ಟಕ್ಕೆ ಸಿಲುಕಿದ್ದಾರೆ ಮುಂಗಾರು ಹಾಗೂ ಹಿಂಗಾರು ಮಳೆಯು ಕೈಕೊಟ್ಟ ಪರಿಣಾಮ ರೈತರು ಬೆಳೆದ ಬೆಳೆಗಳಿಗೆ ನೀರು ಇಲ್ಲದಂತಾಗಿದೆ ಆದಕಾರಣ ರೈತರು ಕೊಳವೆಬಾವಿ ಕೊರೆಸುವುದರ ಮುಖಾಂತರವಾಗಿ ಬೆಳೆಗಳಿಗೆ ನೀರನ್ನು ಒದಗಿಸುತ್ತಿದ್ದಾರೆ ಇದರಿಂದ ರೈತರಿಗೆ ಅಲ್ಪ ಪ್ರಮಾಣದಲ್ಲಿ ಅನುಕೂಲವಾಗಿದೆ ಆದರೆ ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಇಂತಹ ನೀತಿ ಅನುಸರಿಸುವುದು ಸರಿಯಲ್ಲ ಕೂಡಲೇ ಸರ್ಕಾರ ಈ ನೀತಿಯನ್ನು ಹಿಂಪಡೆಯಬೇಕು ಬೇಕಾದರೆ ಸರ್ಕಾರ 200 ಯೂನಿಟ್ ವಿದ್ಯುತ್ ಗ್ಯಾರಂಟಿ ಯೋಜನೆಯನ್ನು ಸರ್ಕಾರ ಕೂಡಲೇ ಹಿಂಪಡಿಯಲ್ಲಿ ಹಾಗೂ ಮಾನ್ಯ ಮುಖ್ಯಮಂತ್ರಿ ಅವರಿಗೆ ಕಷ್ಟವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಕೂಡಲೇ ಸರ್ಕಾರ ಆದೇಶವನ್ನು ಹಿಂಪಡೆಯದಿದ್ದರೆ ಮುಂದಿನ ದಿನಮಾನಗಳಲ್ಲಿ ರಾಜ್ಯದ ಎಲ್ಲಾ ರೈತರೊಂದಿಗೆ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತ ಮುಖಂಡರಾದ ಶರಣಗೌಡ ಬಿ ಪೊಲೀಸ್ ಪಾಟೀಲ್ ಮಲ್ಲಬಾದ್ ಅವರು ಪತ್ರಿಕಾ ಪ್ರಕಟಣೆ ಮೂಲಕ ಸರ್ಕಾರಕ್ಕೆ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.