ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

8 ನೇ ರಾಷ್ಟೀಯ ಆಯುರ್ವೇದ ದಿನಾಚರಣೆ ಆರೋಗ್ಯಕರ ಜೀವನಕ್ಕಾಗಿ ಆಯುರ್ವೇದ ಜೀವನ ಶೈಲಿ ರೂಡಿ ಮಾಡಿಕೊಳ್ಳಿ:ಜಿ.ಪಂ. ಸಿಇಒ ಗರಿಮಾ ಪನ್ವಾರ

ಯಾದಗಿರಿ:ನವೆಂಬರ್ 10,ಪ್ರಸ್ತುತ ಸನ್ನಿವೇಶಗಳಲ್ಲಿ ಬದಲಾದ ಆಹಾರ ಮತ್ತು ಜೀವ ಶೈಲಿಯಿಂದ ಸದಾ ಒತ್ತಡದಲ್ಲಿ ಜೀವನ ಸಾಗಿಸುವ ಜೊತೆಗೆ ಹಲವಾರು ಕಾಯಿಲೆಗಳನ್ನು ಎದುರಿಸುತ್ತಿದ್ದೇವೆ ಇದರಿಂದ ಆರೋಗ್ಯಕರ ಜೀವನ ಸಾಗಿಸುವುದು ನಮಗೆ ಸಾಧ್ಯವಾಗುತ್ತಿಲ್ಲ.ಇದೆಲ್ಲದಕ್ಕೂ ಆಯುರ್ವೇದ ಜೀವನ ಶೈಲಿ ರೂಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.
ಆಯುರ್ವೇದ ಕೇವಲ ಔಷಧವಾಗಿರದೆ ಅದು ಜೀವನ ಶೈಲಿಯಾದಾಗ ಮಾತ್ರ ನಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಗರೀಮಾ ಪನ್ವಾರ ಅವರು ತಿಳಿಸಿದರು.
ಯಾದಗಿರಿ ಹಿಂದಿ ಪ್ರಚಾರ ಸಭಾದಲ್ಲಿ ಶುಕ್ರವಾರ ರಂದು ನಡೆದ 8ನೇ ರಾಷ್ಟೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಮತ್ತು ಆಯುಷ್ ಇಲಾಖೆ ವತಿಯಿಂದ ಯಾದಗಿರಿ ನಗರದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಹಮ್ಮಿಕೊಂಡಿದ್ದ 8ನೇ ರಾಷ್ಟೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಜರುಗುದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.ಸಾರ್ವಜನಿಕರಿಗೆ ಆರೋಗ್ಯದ ಕುರಿತು ಅರಿವು ಮೂಡಿಸಲು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಆಯುಷ್ ಇಲಾಖೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಪ್ರಭುಲಿಂಗ ಮಾನಕರ ಅವರು ಮಾತನಾಡಿ ಯುವ ಜನರು ಆಹಾರದ ಮಹತ್ವ ಕೊಡದೆ ಹಲವಾರು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ಆರೋಗ್ಯ ಶಿಬಿರದಿಂದ ಸಾರ್ವಜನಿಕರಿಗೆ ಹಲವಾರು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ನೀಡಿದಂತಾಗುತ್ತದೆ ಎಂದು ತಿಳಿಸಿದರು.ನಿವೃತ್ತ ಶಿಕ್ಷಕರಾದ ಶ್ರೀ ರಾಮಯ್ಯ ಇವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಕೂಡಾ ಆಯುರ್ವೇದದ ಕುರಿತು ಅರಿವೂ ಮೂಡಿಸುವುದು ಅಗತ್ಯ,ದಿನ ನಿತ್ಯ ಯೋಗ ಮತ್ತು ವ್ಯಾಯಾಮ ಮಾಡುವುದು ಅಗತ್ಯ ಎಂದು ಹೇಳಿದರು.ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ವಂದನಾ.ಜೆ.ಗಾಳಿಯವರು ಮಾತನಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ.ಸಿದ್ದಪ್ಪ ಹೊಟ್ಟಿ, ಹಿರಿಯ ಪತ್ರಕರ್ತರಾದ ಸಿ.ಎಂ ಪಟ್ಟೆದಾರ, ಪತಂಜಲಿಯ ಶ್ರೀ ಅನೀಲ್ ಗುರೂಜಿಯವರು ಉಪಸ್ಥಿತರಿದ್ದರು.ಉಚಿತ ಆರೋಗ್ಯ ಶಿಬಿರದಲ್ಲಿ ಆಯುಷ್ ವೈದ್ಯರಿಂದ ಸುಮಾರು 200 ಹೆಚ್ಚು ಜನರು ಶಿಬಿರದ ಸದುಪಯೋಗ ಪಡೆದಕೊಂಡರು. ಕಾರ್ಯಕ್ರಮವನ್ನು ಶ್ರೀ ಸಂಗಮೇಶ ಕೆಂಭಾವಿ ನಿರೂಪಿಸಿದರು,ಡಾ.ಪ್ರಕಾಶ ರಾಜಾಪೂರ ಸ್ವಾಗತಿಸಿದರು,ಡಾ.ಸುನಂದ ಕುದರಿ ವಂದಿಸಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಯಾದಗಿರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!