ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ:ಯುವಕ ಮುಖಂಡ ಕರಣ ಸುಬೇದಾರ ನೇತೃತ್ವದಲ್ಲಿ ಸಂಭ್ರಮಾಚರಣೆ

ಶಹಾಪೂರ:ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ವರಿಷ್ಟರು ನೇಮಕ ಮಾಡಿರುವುದು ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ಮುಖಂಡರಲ್ಲಿ ಸಂತಸ ಮತ್ತು ಹರ್ಷ ತಂದಿದೆ ಎಂದು ಬಿಜೆಪಿ ಮುಖಂಡ ಕರಣ ಸುಬೇದಾರ ಹೇಳಿದರು.
ಶಹಾಪುರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಮಾತನಾಡಿ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಹಿರಿಯ ಮುತ್ಸದಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗ ದರ್ಶನದಲ್ಲಿ ವಿಜಯೇಂದ್ರ ಅವರು ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ ಅವರ ನೇಮಕದಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಆನೆ ಬಲ ಬರಲಿದೆ ಪಕ್ಷಕ್ಕೆ ನೀಡಿರುವ ದೀಪಾವಳಿ ಹಬ್ಬದ ಈ ಕೊಡುಗೆ ಬರಲಿರುವ ಲೋಕಸಭಾ-2024 ರ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಹ ತುಂಬಲಿದೆ.
ವಿಜಯೇಂದ್ರ ನಾಯಕತ್ವದಲ್ಲಿ ಕಾರ್ಯಕರ್ತರು ಐಕ್ಯತೆಯಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಾ ಪ್ರವೃತ್ತರಾಗಲಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದ ಕಾರ್ಯಕರ್ತರಲ್ಲಿ ಹೊಸ ಅಲೆ ಮತ್ತು ಶಕ್ತಿಯನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರು ತುಂಬಲಿದ್ದಾರೆ ಎಂದು ಅವರ ನೇಮಕ್ಕೆ ಹರ್ಷವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಬ್ದುಲ್ ಹಾದಿಮನಿ,ಕರಬಸು ಬೀರಾಳ್,ಮಲ್ಲಿಕಾರ್ಜುನ್ ಜಾಕಾ,ಉಮೇಶ ಮಹಾಮನಿ,ಶರಣಗೌಡ ಕರಣ್ ಶಿರವಾಳ, ಶಿವಕುಮಾರ್ ಶಿರವಾಳ,ಮಹೇಶ ದೊರೆ, ಸಾಯಿಬಣ್ಣ ಶಹಾಪುರ,ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!