ಯಾದಗಿರಿ:ಶಹಾಪುರ ತಾಲೂಕಿನ ಹೊತಪೇಟ ಸರಕಾರಿ ಪ್ರೌಢ ಶಾಲೆಯಲ್ಲಿ ಇಂದು ಕಾನೂನಿನ ಅರಿವು-ನೆರವು ಕಾರ್ಯಕ್ರಮ-ಫ್ಯಾನ್ ಇಂಡಿಯಾ ಕಾರ್ಯಕ್ರಮದ ಅಡಿಯಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ನಿಷೇಧದ ಬಗ್ಗೆ ಗ್ರಾಮ ಪಂಚಾಯಿತಿ ವತಿಯಿಂದ ಕಾನೂನಿನ ಅರಿವು ಹಾಗೂ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಅಂಬಲಮ್ಮ ನೆರವೇರಿಸಿದರು.ಕುಮಾರಿ ಮಂಜುಳಾ ಹಾಗೂ ದೇವಮ್ಮ ಬಾಲಕಾರ್ಮಿಕ ಹಾಗೂ ಬಾಲ್ಯ ವಿವಾಹ ಸಮಸ್ಯೆ ಬಗ್ಗೆ ಮಾತನಾಡಿದರು ಈ ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ನ್ಯಾಯವಾದಿಗಳು ಬಾಲ್ಯ ವಿವಾಹ ನಿಷೇಧ ಕಾನೂನಿನ ಬಗ್ಗೆ ಸಂಪೂರ್ಣವಾದ ಮಾಹಿತಿ ವಿದ್ಯಾರ್ಥಿಗಳಿಗೆ ನೀಡಿದರು ಗ್ರಾಮ ಪಂಚಾಯಿತಿ ಪಿಡಿಒ,ಗ್ರಾಮ ಪಂಚಾಯಿತಿ ಸದಸ್ಯರು,ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸರಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಚನ್ನ ಬಸವ ರಾಜೇಶ್ವರಿ ಯವರು ಕಾರ್ಯಕ್ರಮ ಅನುಷ್ಠಾನದ ಬಗ್ಗೆ ತಿಳಿಸಿದರು. ಆನಂದ ಕುಮಾರ ಶಿಕ್ಷಕರು ನಿರೂಪಿಸಿದರು, ಶ್ರೀಮತಿ ಸವಿತಾ ಸ್ವಾಗತಿಸಿದರು.ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖ್ಯಸ್ಥರು ಹಾಗೂ ವಿಧ್ಯಾರ್ಥಿ,ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.