ಮೈಸೂರು:ನವೆಂಬರ್ ೧ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಜಿಲ್ಲಾಡಾಳಿತ ವತಿಯಿಂದ ಸನ್ಮಾನಿಸುವುದು ಸರಿ,ಆದರೆ ಈ ಬಾರಿ ಅನರ್ಹರನ್ನು ಆಯ್ಕೆ ಮಾಡಿ ಕಳಂಕ ತರಲಾಗಿದೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.
2023ರ ನವೆಂಬರ್ ನಲ್ಲಿ ಸಾಧಕರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸುದರ್ಶನ್ ರವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಅವರು ದೂರಿದ್ದಾರೆ.
ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೆ ಕಳಂಕ ತಂದಿರುವ ಸುದರ್ಶನ್ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದರ್ಶನ್ ರವರು ಸಾಧಕರ ಪೂರ್ವ,ಪರ ಮತ್ತು ಅವರ ಸಾಧನೆಗಳನ್ನು ಗುರುತಿಸದೆ ಕಾಟಾಚಾರಕ್ಕೆ ಪ್ರಶಸ್ತಿ ನೀಡುವ ಮೂಲಕ ಮೈಸೂರು ಜಿಲ್ಲೆಗೆ ಕಳಂಕ ತಂದಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಯಾವ ಮಾನ ದಂಡದ ಮೇಲೆ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರಶಸ್ತಿ ನೀಡಿದ್ದಾರೆ ಎಂದು ಬಹಿರಂಗವಾಗಿ ತಿಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸುದರ್ಶನ್ ಅವರನ್ನು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಈ ಲೋಪವನ್ನು ಗಂಭೀರವಾಗಿ ಪರಿಗಣಿಸಿ ಸುದರ್ಶನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.