ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ 34 ವರ್ಷಗಳ ಹಿಂದೆ ಪ್ರೊಫೆಸರ್ ನಂಜುಂಡಸ್ವಾಮಿ ರೈತ ಸಂಘ ಅಸ್ತಿತ್ವಕ್ಕೆ ಬಂದಿತ್ತು ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಕಾರಣ ಇಂದು ಮತ್ತೆ ಪುನರ್ ಚಾಲನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆ ಗೌಡ ತಿಳಿಸಿದರು.ಬಿದರಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರು ಬಿದರಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಈ ಭಾಗದಲ್ಲಿ 1989ರಲ್ಲಿ ಪ್ರೊಫೆಸರ್ ನಂಜುಂಡಸ್ವಾಮಿ ನೇತ್ರತ್ವದಲ್ಲಿ ರೈತ ಸಂಘ ಉದ್ಘಾಟನೆಯಾಗಿ ಹಲವಾರು ಹೋರಾಟಗಳ ಮೂಲಕ ಗಮನ ಸೆಳೆದಿದ್ದಾರೆ ಗ್ರಾಮೀಣ ಕಾರಣಾಂತರದಿಂದ ಗ್ರಾಮದಲ್ಲಿ ಸಂಘ ಅಸ್ತಿತ್ವಕ್ಕೆ ಬಂದಿರಲಿಲ್ಲ ಹೀಗಾಗಿ ಈ ಭಾಗದಲ್ಲಿ ಸಂಘಟನೆ ಮಾಡುವ ಮೂಲಕ ಗ್ರಾಮ ಘಟಕ ಪುನರ್ ಪ್ರಾರಂಭಿಸಲಾಗಿದೆ ಗ್ರಾಮದಲ್ಲಿ ಸ್ಮಶಾನವಿಲ್ಲ ಗ್ರಾಮಸ್ಥರಿಗೆ ನಿವೇಶನದ ವ್ಯವಸ್ಥೆ ಇಲ್ಲ ಸರಿಯಾದ ರಸ್ತೆ ಇಲ್ಲ ಇದರಿಂದಾಗಿ ಬಸ್ಸಿನ ವ್ಯವಸ್ಥೆಯೂ ಇಲ್ಲದೆ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ ತಲತಲಾಂತರದಿಂದ ಉಳಿವೆ ಮಾಡುತ್ತಿರುವ ಜಮೀನಿಗೆ ಸಾಗುವಳಿ ಚೀಟಿ ನೀಡಿಲ್ಲ ಗ್ರಾಮದಲ್ಲಿ ಮಕ್ಕಳಿಗೆ ಪ್ರೌಢಶಾಲೆಯ ವ್ಯವಸ್ಥೆ ಇಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಹ ಸ್ಥಗಿತಗೊಂಡಿದೆ ಒಟ್ಟಾರೆ ಕಾಡಂಚಿನ ಗ್ರಾಮ ಮೂಲಭೂತ ಸೌಲಭ್ಯಗಳಿಂದ ವಂಚಿತಗೊಂಡಿರುವುದರಿಂದ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಡಳಿತದ ಮೂಲಕ ರೈತರ ಸಮಸ್ಯೆಗಳಿಗೆ ಗಮನ ಸೆಳೆಯಬೇಕಾಗಿದೆ ಸಂಘಟನೆ ಶಾಂತಿಯುತವಾಗಿ ಗ್ರಾಮದ ಸಮಸ್ಯೆಗಳ ಪಟ್ಟಿ ಮಾಡಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಈ ಭಾಗದ ರೈತ ಮುಖಂಡರು ಸಂಘಟನೆಯಲ್ಲಿ ತೊಡಗಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಶಾಂತ ಮಲ್ಲಪ್ಪ ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜಾದ್ ಖಾನ್ ರೈತ ಮುಖಂಡರಾದ ಶಕ್ತಿವೇಲ್,ತಂಗವೇಲ್,ಪಳನಿ ಸ್ವಾಮಿ,ಸೂರ್ಯ ವೇಲು,ಸ್ವಾಮಿ ಮಸಣಶೆಟ್ಟಿ,ಅರ್ಪಿತರಾಜ್ ಇನ್ನಿತರರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.