ಕೊಪ್ಪಳ:ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ,ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡಂತೆ ಶಿಷ್ಠಾಚಾರಕ್ಕೆ ಅನುಗುಣವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರ ನೇತೃತ್ವದಲ್ಲಿ ಡಿಸೆಂಬರ್ 01 ರಂದು ಕುಷ್ಟಗಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಸಭಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05.30 ರವರೆಗೆ ಸಚಿವರು ಜನತಾ ದರ್ಶನ ನಡೆಸಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತದೆ. ಆದ್ದರಿಂದ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವಂತೆ ಹಾಗೂ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಜಿಲ್ಲಾಡಳಿತದಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರಿಗೆ ಅದರ ಫಲಿತಾಂಶವನ್ನು ಒದಗಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕೋಶ/ವಿಭಾಗದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಡಿ.01 ರಂದು ಜನತಾ ದರ್ಶನ ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗತಕ್ಕದ್ದು ಒಂದು ವೇಳೆ ಗೈರು ಹಾಜರಾದಲ್ಲಿ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.