ಮೈಸೂರು:ಕನಕ ಜಯಂತೋತ್ಸವದ ಕನಕ ಸಮಿತಿಯ ಅಧ್ಯಕ್ಷರಾದ ಕೃಷ್ಣ ರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ಹೆಸರನ್ನು ಕನಕ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಕೈಬಿಟ್ಟಿರುವುದು ಸರಿಯಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಕುರುಬ ಸಮಾಜದ ಪ್ರಬಲ ನಾಯಕರು ಮತ್ತು ಎಲ್ಲಾ ವರ್ಗದ ಜನತೆಯ ಪ್ರೀತಿ ಪಾತ್ರರಾಗಿರುವ ಸೋಮಶೇಖರ್ ಅವರ ಹೆಸರನ್ನೇ ಆಹ್ವಾನ ಪತ್ರಿಕೆಯಲ್ಲಿ ಕೈಬಿಟ್ಟಿರುವುದು ಜಿಲ್ಲಾಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿ
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಸೋಮಶೇಖರ್ ಅವರ ಕ್ಷಮೆ ಕೇಳಬೇಕು ಇಲ್ಲವಾದಲ್ಲಿ ಎಂ ಕೆ ಎಸ್ ಅಭಿಮಾನಿಗಳು ತೀವ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ತೇಜಸ್ವಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
