ವಿಜಯಪುರ:ವಿಶ್ವ ಏಡ್ಸ ದಿನದಂದು ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಜಿಲ್ಲಾ ಆಸ್ಪತ್ರೆ ವಿಜಯಪುರ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಜಯಪುರ ಜಿಲ್ಲೆಯ ಕಲಾ ವಾಣಿಜ್ಯ ಬಿಸಿಎ (ದರಬಾರ) ಮಹಾವಿದ್ಯಾಲಯದ ಪ್ರಾಚಾರ್ಯರು ಎನ್.ಎಸ್.ಎಸ್ ಘಟಕದ ಅಧಿಕಾರಿಗಳು ಹಾಗೂ ವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಉಪಸ್ಥಿತಿಯಲ್ಲಿ ಈ ಏಡ್ಸ್ ನಿಯಂತ್ರಣ ಜಾಥಾವನ್ನು ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿ ವೃತ್ತದ ಮಾರ್ಗವಾಗಿ ಸಂತ ಅನ್ನಮ್ಮ ದೇವಾಲಯ (ಚರ್ಚ್) ವರೆಗೆ ಜಾಥಾವನ್ನು ಕೈಗೊಳ್ಳಲಾಯಿತು ಈ ಜಾಥಾ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ತಾಲೂಕಾ ಆರೋಗ್ಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ವರದಿ-ಆಕಾಶ ಹೂಗಾರ ವಿಜಯಪುರ
