ಹನೂರು:ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆದ್ದನಪಾಳ್ಯ ಸರ್ಕಾರಿ ಶಾಲೆಗೆ ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಅವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಕಳೆದ ಒಂದು ವಾರದಿಂದ ಪೆದ್ದನಪಾಳ್ಯ ಸರ್ಕಾರಿ ಶಾಲೆಯಲ್ಲಿ ಶಾಲೆಯ ಕಟ್ಟಡ ದುರಸ್ತಿಗಾಗಿ ಹಾಗೂ ಸುತ್ತಗೋಡೆ ನಿರ್ಮಾಣ ಮಾಡಿ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ಪ್ರತಿಭಟಿಸಿದ್ದರು.
ಈ ಸಂಬಂಧ ಶಾಲೆಗೆ ಭೇಟಿ ನೀಡಿದ ಶಾಸಕರು ಶಿಕ್ಷಣ ಇಲಾಖೆ ಅಧಿಕಾರಿಗಳು ಪೋಷಕರು ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ.
ಈಗಾಗಲೇ ಇರುವ ಶಾಲೆಯ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ದಾನ ನೀಡಿದ್ದಾರೆ ಎಂಬ ಉದ್ದೇಶದಿಂದ ಶಾಲೆಯಲ್ಲಿನ ಬೋರ್ ವೆಲ್ ಹಾಗೂ ಜಾಗವನ್ನು ತಮಗಿಷ್ಟ ಬಂದಂತೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸುತ್ತುಗೋಡೆ ಇಲ್ಲದ ಕಾರಣ ಸಾಕುಪ್ರಾಣಿಗಳ ಹಾವಳಿಯಿಂದ ಮಕ್ಕಳಿಗೆ ತೊಂದರೆ ಆಗುತ್ತದೆ.
ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ಸುರಕ್ಷತೆ ಮಾಡಿಕೊಡಬೇಕು ಅಲ್ಲಿಯವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ದೂರಿದರು.
ಇದಕ್ಕೆ ಸಂಬಂಧಿಸಿದಂತೆ ಶಾಸಕರು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಆದಷ್ಟು ಬೇಗ ಶಾಲೆಯ ಸುತ್ತುಗೋಡೆ ನಿರ್ಮಾಣಕ್ಕೆ ಹಾಗೂ ಶಾಲೆಯ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು ಅಲ್ಲದೆ ಶಾಲಾ ಜಾಗಕ್ಕೆ ಸಂಬಂಧಪಟ್ಟ ಖಾಸಗಿ ವ್ಯಕ್ತಿಯ ಜೊತೆ ಮಾತನಾಡಿ ಏನೇ ಸಮಸ್ಯೆಗಳಿದ್ದರೂ ಬಗೆಹರಿಸಿಕೊಂಡು ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಉಪನಿರ್ದೇಶಕರಾದ ರಾಮಚಂದ್ರ ರಾಜೆ ಅರಸ್ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಜಿಲ್ಲಾ ಆರೋಗ್ಯ ಅಧಿಕಾರಿ ಚಿದಂಬರಂ, ತಾಲೂಕು ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅಮಲ್ ದಾಸ್ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಧ್ಯಕ್ಷ ಅಶೋಕ್ ಹಾಗೂ ಮುಖಂಡರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.