ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬರಪರಿಹಾರ ನೀಡುವಂತೆ ಆಮ್ ಆದ್ಮಿ ಪಾರ್ಟಿ ಒತ್ತಾಯ

ಕರ್ನಾಟಕವು ಪ್ರಸ್ತುತ ಭೀಕರ ಬರಗಾಲವನ್ನು ಎದುರಿಸುತ್ತಿದೆ ನವೆಂಬರ್ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಕಾಣುತ್ತಿಲ್ಲ.ಈ
ಬರಗಾಲವು ನಮ್ಮ ರೈತರು ಮತ್ತು ಕೃಷಿಯನ್ನು ಅವಲಂಬಿಸಿರುವ ರಾಜ್ಯದ ಸುಮಾರು 65% ಜನರಿಗೆ ವಿನಾಶಕಾರಿಯಾಗಿ ಪರಿಣಮಿಸುತ್ತಿದೆ. ರಾಜ್ಯದ ರೈತರು ಮಳೆ ಇಲ್ಲದೆ ಬೆಳೆ ಹಾನಿ,ಗುತ್ತಿಗೆಗೆ ಕೊಟ್ಟು ಕಳೆದುಕೊಂಡ ಹಣ,ಸಾವಿರಾರು ಕೋಟಿ ಸಾಲ ಮತ್ತು ಅದರ ಬಡ್ಡಿ,ಬೆಲೆ ಏರಿಕೆ ಹೀಗೆ ಹಲವಾರು ಸಮಸ್ಯೆಗಳನ್ನು ಎದರಿಸುತ್ತಿದ್ದಾರೆ. ಬೆಳೆಯೂ ಇಲ್ಲದೆ ಬೇರೆ ಯಾವ ಆದಾಯವೂ ಇಲ್ಲದೆ ಕುಟುಂಬ ನಿರ್ವಹಿಸುಲೂ ಕಷ್ಟವಾದ ಪರಸ್ಥಿತಿಗೆ ಬಂದಿದ್ದಾರೆ.
ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ಬರ ಪರಿಹಾರ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಕರ್ನಾಟಕದಾದ್ಯಂತ ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಲಕ್ಷಾಂತರ ಜನ ತಮ್ಮ ಸಮಸ್ಯೆಗಳನ್ನು ದಿನವೂ ಹಂಚಿಕೊಳ್ಳುತ್ತಿದ್ದಾರೆ.
ಕರ್ನಾಟಕದ 6 ಕೋಟಿ ಜನ ಈ ಸಂಕಷ್ಟದ ಕಾಲದಲ್ಲಿ ತಾವು ಜನರ ಸಮಸ್ಯೆಗಳಗೆ ಸ್ಪಂದಿಸುತ್ತೀರೆಂದು ಎದುರು ನೋಡುತ್ತಿದ್ದಾರೆ. ಕರ್ನಾಟಕದ 40 ಸಂಸದರಲ್ಲಿ ಹೆಚ್ಚಿನವರು ಬಿಜೆಪಿಗರೇ ಇದ್ದರೂ ಕೇಂದ್ರ ಸರಕಾರಕ್ಕೆ ರಾಜ್ಯದ ಬರ ಪರಸ್ಥಿತಿಯ ತೀವ್ರತೆಯನ್ನು ಪರಿಣಾಮಕಾರಿಯಾಗಿ ತಿಳಿಸುವಲ್ಲಿ
ವಿಫಲರಾಗಿದ್ದಾರೆ.299 ಶಾಸಕರಲ್ಲಿ ಹೆಚ್ಚಿನವರು ಕಾಂಗ್ರೆಸ್ಸಿಗರೇ ಇದ್ದರೂ ಕೂಡಾ ಸರಕಾರ ಬರದ ಸಮಸ್ಯೆಗೆ ತುರ್ತಾಗಿ ಸ್ಪಂದಿಸುವಂತೆ
ನೋಡಿಕೊಳ್ಳುವುದನ್ನು ಮರೆತು ತಮ್ಮ ಅಧಿಕಾರ ದಾಹ ಹಾಗೂ ಒಳ ರಾಜಕೀಯದಲ್ಲೇ ಸಮಯ ಕಳೆಯುತ್ತಿದ್ದಾರೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನಮ್ಮ ರೈತರು ಮತ್ತು ಗ್ರಾಮೀಣ ಸಮುದಾಯಗಳು ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸುವ ಬದ್ಧತೆ ಇದೆಯೇ ಎಂಬ ಪ್ರಶ್ನೆ ಎದ್ದು ಕಾಡುತ್ತಿದೆ.
ಈ ಬರ ಪರಸ್ಥಿತಿ ನೀಗಿಸಲು ಕೇಂದ್ರದ ಹೆಚ್ಚಿನ ಅನುದಾನ ಹಾಗೂ ಸಹಾಯದ ಜೊತೆ ಜೊತೆಗೆ ರಾಜ್ಯ ಸರಕಾರ ಸ್ಪಂದಿಸುವುದು ಅನಿವಾರ್ಯವಾಗಿದೆ.
ಕರ್ನಾಟಕದ ಜನರ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಆಮ್ ಆದ್ಮ ಪಕ್ಷವು ಒತ್ತಾಯಿಸುತ್ತದೆ. ತುರ್ತು ಪರಸ್ಥಿತಿಯನ್ನು ಅರ್ಥೈಸಿಕೊಂಡು,ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಲು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ.
1)ಬರ ಪೀಡಿತ ಪ್ರದೇಶಗಳ ಸರಿಯಾದ ವೈಜ್ಞಾನಿಕ ಸಮೀಕ್ಷೆ ಮಾಡುವುದು.
2)ಸರ್ವ ಪಕ್ಷಗಳ ನಿಯೋಗ ದೆಹಲಿಗೆ ತೆರಳಿ, ತುರ್ತು ಪರಸ್ಥಿತಿಗೆ ಸ್ಪಂದಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸುವುದು.
3)ಬೆಳೆ ಹಾನಿ ಆದಲ್ಲಿ ರೈತರಿಗೆ ಬೆಳೆ ವಿಮೆಯ ತುರ್ತು ಪಾವತಿ ಮಾಡಬೇಕು.
4)ಬರಪೀಡಿತ ಪ್ರದೇಶದ ರೈತರಿಗೆ ಎಕೆರೆಗೆ 25,000 ರೂ ಪರಿಹಾರ ಕೊಡಬೇಕು. ಪಶುಸಂಗೋಪನೆಯಲ್ಲಿ ತೊಡಗಿರುವ ಹಾಗೂ ಜಾನುವಾರು
ಹೊಂದಿರುವ ರೈತರಿಗೆ ಪ್ರತಿ ಜಾನುವಾರಿಗೆ 5,000 ರೂ ಪರಿಹಾರ ಕೊಡಬೇಕು.
5)ಬೆಲೆ ಏರಿಕೆ ನೀಗಿಸಿ ಕುಟುಂಬ ನಿರ್ವಹಿಸಲು ಪ್ರತಿ ಕುಟುಂಬಕ್ಕೆ ಉಚಿತ ರೇಷನ್ ಒದಗಿಸಬೇಕು.
6)ಮನರೇಗಾ ಅಥವಾ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮೀಣ ಭಾಗದಲ್ಲಿ ಆದಾಯ ವ್ಯವಸ್ಥೆ ಕಲ್ಪಿಸಬೇಕು.
7)ಸಾಂಕ್ರಾಮಿಕ ರೋಗಗಳು ಹರಡದಂತೆ ನೋಡಿಕೊಂಡು ಸರಕಾರಿ ಆಸ್ಪತ್ರೆಗಳ ವ್ಯವಸ್ಥೆ ಸುಧಾರಿಸಬೇಕು.
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ರೈತರು ಆತ್ಮಹತ್ಯೆಯ ದಾರಿಯನ್ನು ಹಿಡಿದರೆ,ಅದಕ್ಕೆ ಜವಾಬ್ದಾರಿ ನಿಮ್ಮ ಸರಕಾರವಾಗಲಿದೆ ಒಂದು ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮ ಪಕ್ಷವು ಸಾಮಾನ್ಯ ಜನರ ಹಕ್ಕುಗಳು ಮತ್ತು ಯೋಗ ಕ್ಷೇಮಕ್ಕಾಗಿ ಹೋರಾಡಲು ಬದ್ಧವಾಗಿದೆ ತಮ್ಮಿಂದ ಸರಿಯಾದ ಸಮಾದಾನ
ಸಿಗದಿದ್ದರೆ ನಾವು ಬೀದಿಗಿಳಿದು ಜನಪರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗುವುದೆಂದು ಈ ಮೂಲಕ ನಾವು ಸರಕಾರಕ್ಕೆ
ಎಚ್ಚರಿಸುತ್ತಿದ್ದೇವೆ.ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿ ಜಿಲ್ಲಾಅದ್ಯಕ್ಷ ಹರೀಶ್,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹಾದೇವಸ್ವಾಮಿ (ಮಾದು),ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹದೇವ್ ಪ್ರಸಾದ್ , ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಶಿವರಾಮು, ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ