ಕಾನೂನು ಸೇವಾ ಪ್ರಾಧಿಕಾರ,ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು
ಶಹಾಪುರ:ಶಾಲಾ ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ ಮತ್ತು ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನ ಅಂಗವಾಗಿ “ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ 2016” ರ ಕುರಿತು ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮಕ್ಕೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರವೀಂದ್ರ,ಜಿಲ್ಲಾಧಿಕಾರಿಗಳಾದ ಶ್ರೀಮತಿ ಸುಶೀಲಾ.ಬಿ ಹಾಗೂ ಸದಸ್ಯರು ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ, ಗೌರವಾನ್ವಿತ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ಬಸವರಾಜ ಶಹಾಪುರ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಶ್ರೀಮತಿ ಉಮಾಶ್ರೀ ಕೋಳಿ, ತಾಲೂಕ ದಂಡಾಧಿಕಾರಿಗಳಾದ ಉಮಾಕಾಂತ ಹಳ್ಳೆ ಕಾರ್ಯಕ್ರಮ ಚಾಲನೆ ನೀಡಿದರು.
ಹೊಸ ತಾಲೂಕ ದಂಡಾಧಿಕಾರಿಗಳ ಕಛೇರಿಯಿಂದ ಸಿ.ಬಿ ಕಾಮನ್ ವೃತ್ತದವರೆಗೆ ಜಾಥಾ ಮತ್ತು ರೈಡ್ ಕಾರ್ಯಕ್ರಮವನ್ನು ನಡೆಸಿ 4 ಬಾಲ ಕಾರ್ಮಿಕ ಮಕ್ಕಳು ಹಾಗೂ ಒಬ್ಬ ಕಿಶೋರ ಕಾರ್ಮಿಕ ಮಗುವನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರವೀಂದ್ರ ಹೊನಾಲೆ ಬಾಲಾ ಕಾರ್ಮಿಕ ಮಕ್ಕಳ ದಿನ ದುಡಿಮೆಯನ್ನು ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016 ಅನ್ನು ಜಾರಿಗೆ ತರಲಾಗಿದೆ ಈ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮತ್ತು 14 ರಿಂದ 18 ವರ್ಷದ ಕಿಶೋರ್ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿ ಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಶ್ರೀಮತಿ ಸುಶೀಲಾ.ಬಿ ಅವರು ಬಾಲಾ ಕಾರ್ಮಿಕ ಮತ್ತು ಕಿಶೋರ್ ಕಾರ್ಮಿಕ ಮಕ್ಕಳನ್ನು ಸೇರಿಸಿಕೊಂಡಿಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಮತ್ತು 20,000 ರೂ ಗಳಿಂದ 50,000 ರೂ ಗಳ ವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ಸಹ ವಿಧಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಲಾ ಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕ್ ನಳ್ಳಿ, ಕಾರ್ಮಿಕ ನಿರೀಕ್ಷಕರಾದ ಸಾಬೇರಾ ಬೇಗಂ,ಕ್ಷೇತ್ರ ಶಿಕ್ಷಣಾಧಿಕಾರಿಗಳು,ಶಿಶು ಅಭಿವೃದ್ಧಿ ಯೋಜನಾ ನಿರ್ದೇಶಕರು,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್