ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶೀಘ್ರವೇ ಗೃಹರಕ್ಷಕರ ಕರ್ತವ್ಯ ಭತ್ಯೆ ಪರಿಷ್ಕರಣೆ: ಡಾ.ಜಿ ಪರಮೇಶ್ವರ್ ಹೇಳಿಕೆ

ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವರು

ಬೆಂಗಳೂರು/ಶಿವಮೊಗ್ಗ:ಗೃಹ ರಕ್ಷಕರಿಗೆ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ಭತ್ಯೆಯನ್ನು ಅವಲೋಕಿಸಿ ಶೀಘ್ರವೇ ಕರ್ತವ್ಯ ಭತ್ಯೆಯನ್ನು ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಮಾಜಿ ಸಚಿವೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿ,ಪ್ರಸ್ತುತ 21,327 ಪುರುಷ ಹಾಗೂ 4555 ಮಹಿಳೆಯರು ಸೇರಿ ಒಟ್ಟು 25,882 ಗೃಹರಕ್ಷಕರು ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಸರ್ಕಾರದ ಆದೇಶದಂತೆ ಪೊಲೀಸ್ ಇಲಾಖೆಯ ಬಂದೋಬಸ್ತ್,ಕಾನೂನು ಸುವ್ಯವಸ್ಥೆ,ಸಂಚಾರ ನಿಯಂತ್ರಣ ಹಾಗೂ ಠಾಣೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ರೂ.750, ಬೇರೆ ಇಲಾಖೆಗಳಲ್ಲಿ ರೂ.600 ಹಾಗೂ ಪಹರೆ ಕೆಲಸಕ್ಕೆ ಬೆಂಗಳೂರು ನಗರದಲ್ಲಿ ರೂ.455 ಹಾಗೂ ಇತರೆ ಸ್ಥಳದಲ್ಲಿ ರೂ.380 ಭತ್ಯೆ ನೀಡಲಾಗುತ್ತಿದೆ. ಈ ವ್ಯತ್ಯಾಸವನ್ನು ಸರಿಪಡಿಸಿ ರೂ.750 ದಿನಭತ್ಯೆ ನೀಡಲು ಸರ್ಕಾರ ಮಟ್ಟದಲ್ಲಿ ಚಿಂತಿಸಲಾಗುತ್ತಿದೆ” ಎಂದು ಸಚಿವರು ತಿಳಿಸಿದರು.
“ಗೃಹರಕ್ಷಕರಲ್ಲಿ ಯಾವುದೇ ತಾರತಮ್ಯ ಇಲ್ಲದೆ ಕರ್ತವ್ಯಕ್ಕೆ ನಿಯೋಜಿಸಬೇಕು.ಗೃಹರಕ್ಷಕರಿಗೆ ಆರೋಗ್ಯ ಭದ್ರತೆ,ಪ್ರಯಾಣ ಭತ್ಯೆಗಳನ್ನು ನೀಡಬೇಕು”ಎಂದು ಶಾಸಕಿ ಜೊಲ್ಲೆ ಶಶಿಕಲಾ ಒತ್ತಾಯಿಸಿದರು.

ಶೇ.80 ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ:

2025ರ ವೇಳೆಗೆ ರಾಜ್ಯದ ಶೇ.80 ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ ಕಲ್ಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.ವಿಧಾನಸಭೆಯ ಪ್ರಶೋತ್ನರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿ ಅವರು ಮಾತನಾಡಿ,“ಈ ಹಿಂದೆ ಗೃಹ ಸಚಿವನಾಗಿದ್ದ ವೇಳೆ 2020ರ ವೇಳೆಗೆ ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು ಯೋಜನೆ ರೂಪಿಸಿದ್ದೆ ನಂತರ ಬಂದ ಸರ್ಕಾರವು ಯೋಜನೆಯನ್ನು ಮುಂದುವರಿಸಿದೆ ಗ್ರಾಮೀಣ ಹಾಗೂ ಅವಶ್ಯಕತೆ ಇರುವ ಕಡೆ ವಸತಿ ಗೃಹಗಳನ್ನು ನಿರ್ಮಿಸಲಾಗುವುದು ಈಗಾಗಲೇ ಶೇ.40 ರಷ್ಟು ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ” ಎಂದು ತಿಳಿಸಿದರು.

“ಹೊನ್ನಾಳಿ ತಾಲ್ಲೂಕು ನ್ಯಾಮತಿಯಲ್ಲಿ 12 ಹೊಸ ವಸತಿ ಗೃಹಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪೊಲೀಸ್ ಠಾಣೆಗೆ 2.26 ಎಕರೆ ಜಮೀನು ನೀಡಿದ್ದ ದಿ. ಹೆಚ್.ಬಸವರಾಜಪ್ಪನವರ ಪತ್ನಿ ಹಾಗೂ ಮಕ್ಕಳು ರೂ.45 ಲಕ್ಷಕ್ಕೂ ಹೆಚ್ಚಿನ ಪರಿಹಾರ ಕೋರಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈಗಾಗಲೇ ಅವರಿಗೆ ರೂ.53.92 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ನ್ಯಾಯಾಲಯದ ಆದೇಶ ಬಂದ ಕೂಡಲೇ ವಸತಿ ಗೃಹಗಳ ನಿರ್ಮಾಣ ಕಾರ್ಯ ಆರಂಭಿಸುತ್ತೇವೆ”ಎಂದು ಪರಮೇಶ್ವರ್ ಶಾಸಕ ಶಾಂತನಗೌಡ ಡಿ.ಜಿ. ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಆಯವ್ಯಯದಲ್ಲಿ ಹೊಸ ಅಗ್ನಿಶಾಮಕ ಠಾಣೆಗೆ ಪ್ರಸ್ತಾವನೆ:
“ರಾಜ್ಯದ ಹಲವು ತಾಲ್ಲೂಕು ಕೇಂದ್ರಗಳಲ್ಲಿ ಹೊಸ ಅಗ್ನಿಶಾಮಕ ಠಾಣೆ ನಿರ್ಮಿಸಲು ಶಾಸಕರಿಂದ ಕಡೆಯಿಂದ ಮನವಿಗಳು ಬಂದಿವೆ.ಈ ಮನವಿಗಳನ್ನು ಪರಿಗಣಿಸಿ ಮುಂದಿನ ಆಯವ್ಯಯದಲ್ಲಿ ಹೊಸ ಅಗ್ನಿಶಾಮಕ ಠಾಣೆ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ”ಹೇಳಿದರು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!