ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಂಡೀಪುರ:ಅಡಿ ಕಣಿವೆಯ ಬಸವ ವ್ಯಾಘ್ರನಿಗೆ ಬಲಿ

ಗುಂಡ್ಲುಪೇಟೆ:ಬಂಡೀಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಕುಂದಕೆರೆ ವಲಯದ ‌ಆಡಿನ ಕಣಿವೆಯಲ್ಲಿ ‌ಹುಲಿ ದಾಳಿಗೆ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಆಡಿನ ಕಣಿವೆಯ ಸುಮಾರು 54 ವರ್ಷದ ಬಸವ ಎಂಬುವರು ಹುಲಿದಾಳಿಗೆ ಒಳಗಾಗಿ ‌ಮರಣಹೊಂದಿರುವ ದುರ್ದೈವಿಯಾಗಿದ್ದಾನೆ.
ಆದಿವಾಸಿ ಸಮುದಾಯದ ಬಸವ ಕಳೆದ ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಬಂಡೀಪುರದ‌ ಅರಣ್ಯದಲ್ಲಿ ಹುಡುಕಾಟ ನಡೆಸಿದಾಗ ‌ಆಡಿನ‌ ಕಣಿವೆಯ ಸುಮಾರು ‌250-300 ಮೀಟರ್ ದೂರದಲ್ಲಿ ಹುಲಿ ಶೇಕಡಾ 90% ಭಾಗವನ್ನು ತಿಂದು ಹಾಕಿರುವ ಮೃತ ದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಮೃತ ದೇಹವನ್ನು ನೋಡಿದ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಹೆಚ್ಚುತ್ತಿರುವ ವನ್ಯಜೀವಿ ದಾಳಿ:ಬಂಡೀಪುರ ಹುಲಿ ಸಂರಕ್ಷಿತ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವನ ಮೇಲೆ ವನ್ಯಜೀವಿ ದಾಳಿ ಮಾಡಿ ಪ್ರಾಣಹಾನಿ ಉಂಟುಮಾಡುತ್ತಿರುವ ಪ್ರಕರಣಗಳು ಜಾಸ್ತಿಯಾಗುತಿದ್ದು ಕಳೆದ ತಿಂಗಳು ಯಡಿಯಾಲ ವ್ಯಾಪ್ತಿಯ ಬಳ್ಳೂರುಹುಂಡಿ ಗ್ರಾಮದಲ್ಲಿ ಹುಲಿದಾಳಿಗೆ ತುತ್ತಾಗಿರುವ ಘಟನೆ ಮಾಸುವ ಮುನ್ನವೇ ಹುಲಿದಾಳಿಗೆ ಮತ್ತೊಬ್ಬರು ಬಲಿಯಾಗಿರುವ ಘಟನೆ ಕಾಡಂಚಿನ‌ ಗ್ರಾಮಗಳ ಜನರು ಜೀವಭಯದಿಂದ ಜೀವನ ಸಾಗಿಸುವ ಪರಿಸ್ಥಿತಿ ಬಂದಿದೆ.

ವರದಿ-ಕುಮಾರ್ ಗುಂಡ್ಲುಪೇಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!