ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಾನೂನು ಬಾಹಿರ ಚಟುವಟಿಗಳನ್ನು ನಿಯಂತ್ರಿಸಲು ಎಸ್ ಪಿ ಮಿಥುನ್ ಕುಮಾರ್ ಖಡಕ್ ಸೂಚನೆ

ಶಿವಮೊಗ್ಗ:ಶಿವಮೊಗ್ಗ ಜಿಲ್ಲೆಯಾದ್ಯಂತ ವಿಶೇಷವಾಗಿ ಶಿವಮೊಗ್ಗ ನಗರದಲ್ಲಿ ಸಂಘಟಿತ ಅಪರಾಧಗಳ ವಿರುದ್ಧ ಶೂನ್ಯ ಸಹಿಷ್ಣುತೆ (Zero Tolerance) ಹೊಂದಿದ್ದು, ಸಾರ್ವಜನಿಕರು ಮತ್ತು ಮಾದ್ಯಮಗಳಿಂದ ಯಾವುದೇ ದೂರುಗಳು ಬಂದಾಗ ಕೂಡಲೇ ಸ್ಪಂದಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸೂಚಿಸಿದರು.
ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು,ಪೊಲೀಸ್ ಉಪ ನಿರೀಕ್ಷಕರು ಮತ್ತು ಗುಪ್ತ ಮಾಹಿತಿ ಕರ್ತವ್ಯ ನಿರ್ವಹಿಸುವ ಸಿಬ್ಬಂಧಿಗಳ ಸಭೆಯ ನೇತೃತ್ವ ವಹಿಸಿ ಕಾನೂನು ಬಾಹಿರ ಚಟುವಟಿಗಳನ್ನು ನಿಯಂತ್ರಿಸಲು ಖಡಕ್ ಸೂಚನೆ ನೀಡಿದ್ದಾರೆ.
ಮುಂದಿನ 10 ದಿನಗಳಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸಿ, ಹೆಚ್ಚಿನ ದಾಳಿಗಳನ್ನು ನಡೆಸಿ NDPS ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಬೇಕು,ಗಾಂಜಾ ಸೇವನೆ ಪ್ರಕರಣದಲ್ಲಿ ಗಾಂಜಾದ ಮೂಲದ ಬಗ್ಗೆ ಮಾಹಿತಿ ಸಂಗ್ರಹಿಸಿ,ಆ ವ್ಯಕ್ತಿಗೆ ಗಾಂಜಾ ಮಾರಾಟ ಮಾಡಿದ ಮತ್ತು ಗಾಂಜಾ ಬೆಳೆದ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಜೆಯ ವೇಳೆ ಏರಿಯಾ ಡಾಮಿನೇಷನ್ ವಿಶೇಷ ಗಸ್ತು ಮಾಡಿ, ಅನುಮಾನಾಸ್ಪದ ಮತ್ತು ಸಾರ್ವಜನಿಕ ಉಪಟಳ ನೀಡುವ(ತೊಂದರೆ ಕೊಡುವ)ವ್ಯಕ್ತಿಗಳ ವಿರುದ್ಧ ಮುಂಜಾಗ್ರತಾ ಪ್ರಕರಣ ಮತ್ತು ಲಘು ಪ್ರಕರಣಗಳನ್ನು ದಾಖಲಿಸುವುದು ಹಾಗೂ ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದವರನ್ನು ವೈಧ್ಯಕೀಯ ಪರೀಕ್ಷೆಗೆ ಒಳಪಡಿಸಿ,ಗಾಂಜಾ ಸೇವನೆ ಮಾಡಿರುವ ಬಗ್ಗೆ ದೃಡಪಟ್ಟಾಗ ಅಂತಹವರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು.
ಓಸಿ,ಮಟ್ಕಾ,ಇಸ್ಪೀಟು ಜೂಜಾಟಗಳನ್ನು ತಡೆಗಟ್ಟಲು ಠಾಣಾಧಿಕಾರಿಗಳು ಮತ್ತು ಗುಪ್ತ ಮಾಹಿತಿ ಕರ್ತವ್ಯದ ಸಿಬ್ಬಂದಿಗಳು ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಳ ಮಟ್ಟದ ಮಾಹಿತಿಯನ್ನು ಸಂಗ್ರಹಿಸಿ,ಹೆಚ್ಚಿನ ದಾಳಿಗಳನ್ನು ನಡೆಸಿ,ಆರೋಪಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಮತ್ತು ಓಸಿ ಬರೆಯುವ ಹಾಗೂ ಓಸಿ ಆಡಿಸುವ ಕಿಂಗ್ ಪಿನ್ ಗಳನ್ನು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಅವರ ವಿರುದ್ಧ ಬಲವಾದ ಪ್ರಕರಣಗಳನ್ನು ದಾಖಲಿಸಿ,ಪುನಃ ಓಸಿ,ಮಟ್ಕಾ ಜೂಜಾಟದಲ್ಲಿ ತೊಡಗದಂತೆ ಬಿಗಿ ಮಾಡಬೇಕು.
ಪೊಲೀಸ್ ಅಧಿಕಾರಿ/ಸಿಬ್ಬಂಧಿಗಳು ಓಸಿ,ಮಟ್ಕಾ, ಇಸ್ಪೀಟು ಜೂಜಾಟವನ್ನು ತಡೆಗಟ್ಟದೇ ಇದ್ದಲ್ಲಿ ಹಾಗೂ ತಮ್ಮ ಬೇಜವಾಬ್ದಾರಿತನ ಮತ್ತು ನಿರ್ಲಕ್ಷತನದಿಂದ ಓಸಿ,ಮಟ್ಕಾ,ಇಸ್ಪೀಟು ಜೂಜಾಟಗಳು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವುದು ಕಂಡು ಬಂದಲ್ಲಿ ಮತ್ತು ಜಿಲ್ಲಾ ಪೊಲೀಸ್ ಕಛೇರಿಯಿಂದ ಡೆಕಾಯ್ (ಮಾರುವೇಶದಲ್ಲಿ) ಟೀಮ್ ಗಳನ್ನು ಕಳುಹಿಸಿದ ಸಂದರ್ಭದಲ್ಲಿ ಯಾವ ಠಾಣಾ ವ್ಯಾಪ್ತಿಯಲ್ಲಿ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರುವುದು ಕಂಡು ಬರುತ್ತದೆಯೋ ಆ ಠಾಣೆಗಳ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳೇ ನೇರ ಹೊಣೆಗಾರರಾಗಿರುತ್ತಾರೆ. ಅಂತಹ ಅಧಿಕಾರಿ/ಸಿಬ್ಬಂಧಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಇಲಾಖಾ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿಯವರು ಖಡಕ್ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.
ಈ ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ,ಡಿವೈಎಸ್ಪಿ ಸುರೇಶ್ ಎಂ,ಶಿವಮೊಗ್ಗ ಬಿ ಉಪ ವಿಭಾಗ ಹಾಗೂ ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ನಿರೀಕ್ಷಕರು,ಪೊಲೀಸ್ ಉಪ ನಿರೀಕ್ಷಕರು ಹಾಗೂ ಗುಪ್ತ ಮಾಹಿತಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಹಾಜರಿದ್ದರು.

ವರದಿ:ಕೆ ಆರ್ ಶಂಕರ್,ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ