ಶಿವಮೊಗ್ಗ:ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಗುಡ್ಡದ ನೆರಲೆಕೆರೆ ಗ್ರಾಮದ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಅಮಾನತಾದವರು.ಡಿಡಿಪಿಐ ಪರಮೇಶ್ವರಪ್ಪ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಗುಡ್ಡದ ನೇರಳೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯದ ಸ್ವಚ್ಚತೆ ಕಾರ್ಯವನ್ನು ಮಾಡಿಸಲಾಗಿತ್ತು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದೀಗ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪರನ್ನ ಅಮಾನತು ಮಾಡಲಾಗಿದೆ.
