ಹನೂರು:ಕೃಷಿ ಇಲಾಖೆ ವತಿಯಿಂದ ದೊರೆಯುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಮೂಲಕ ಯಾವುದೇ ಲೋಪದೋಷವಿಲ್ಲದೆ ಪಾರದರ್ಶಕ ಕಾಪಾಡಿಕೊಳ್ಳಬೇಕು ಎಂದರಲ್ಲದೆ ರೈತರ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಗಮನಕ್ಕೆ ತರಬೇಕು ಎಂದು ಹನೂರು ಪಟ್ಟಣದ ಲೋಕೋಪಯೋಗಿಯ ಅತಿ ಗಣ್ಯ ವ್ಯಕ್ತಿಗಳ ಅತಿಥಿ ಗೃಹದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ಸೂಚನೆ ನೀಡಿದರು.
ಇಲಾಖೆಯ ಮಹತ್ವದ ದಾಖಲೆಗಳು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ ಸರಕಾರಿ ದಾಖಲೆಗಳು ಹೇಗೆ ಹೊರಗೆ ಹೋಗುತ್ತೆ ಆದರ ಬಗ್ಗೆ ತನಿಖೆ ಮಾಡಲು ಅಧಿಕಾರಿಗಳು ಮುಂದಾಗಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಮೇಲೆ ಯಾವುದಾದರೂ ಆರೋಪಗಳು ಕೇಳಿ ಬಂದರೆ ಅಂಥರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಂದು ಎಚ್ಚರಿಸಿದರು.
ತಾಲ್ಲೂಕಿನಲ್ಲಿ ಹನೂರು ಹೋಬಳಿ 487, ಲೋಕ್ಕಹಳ್ಳಿಯಲ್ಲಿ 488,ರಾಮಾಪುರ 484 ಸೇರಿ ಒಟ್ಟು 1459 ತುಂತುರು ನೀರಾವರಿ ಘಟಕವನ್ನು ನೀಡಿರುವುದಾಗಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಂದ್ರಮ್ಮ ಮಾಹಿತಿ ನೀಡಿದರು ಅಲ್ಲದೆ ಕೃಷಿ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು,ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಮಂಜೂರಾಗಿರುವ ಹುದ್ದೆ ಹಾಗೂ ಖಾಲಿ ಇರುವ ಹುದ್ದೆಗಳ ಅಗತ್ಯ ಮಾಹಿತಿ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳಾದ ನಾಗೇಂದ್ರ, ವೆಂಕಟನಾಯ್ಕ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.