ಶಿಗ್ಗಾವಿ:ತಾಲೂಕಿನ ತಡಸ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಸುಜಾತಾ ಪಾಟೀಲ ಅವರನ್ನು ಕರ್ತವ್ಯ ಲೋಪ ಆರೋಪದಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ. ಅಕ್ಟೋಬರ್ನಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ವಾಹನ ಬದಲಾವಣೆ ಮತ್ತು ತನಿಖೆಯಲ್ಲಿ ಎಸಗಿದ ಲೋಪದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ದಾವಣಗೆರೆ ಪೂರ್ವ ವಲಯ ಐಜಿಪಿ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.
ವರದಿ-ಮಂಜುನಾಥ ಪಾಟೀಲ