ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿಂಗನಾಳ ಗ್ರಾಮದಲ್ಲಿ 535ನೇಯ ಕನಕದಾಸರ ಜಯಂತಿ ದಿನಾಚರಣೆ

ಕಾರಟಗಿ:ತಾಲೂಕಿನ ಸಿಂಗನಾಳ ಗ್ರಾಮದಲ್ಲಿ 535ನೆಯ ಕನಕ ಜಯಂತಿಯ ಎಲ್ಲಾ ಸಮಾಜದ ಬಾಂಧವರಿಂದ ಸಂಭ್ರಮದಿಂದ ಆಚರಣೆ ಮಾಡಲಾಯಿತು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರುದ್ರೇಶ್ ಬಿ ಮಾತನಾಡಿ ಶ್ರೀ ಕನಕದಾಸರು 15-16 ನೆಯ (1508-1606) ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನಕದಾಸರ ಮೂಲ ಹೆಸರು ತಿಮ್ಮಪ್ಪನಾಯಕ. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನೆಕಾರರು ಮತ್ತು ಪುರಂದರ ದಾಸರೊಂದಿಗೆ ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆಯನ್ನು ನೀಡಿದವರು.
ದಾಸ ಸಾಹಿತ್ಯಕ್ಕೆ ವೈಶಿಷ್ಟಪೂರ್ಣವಾದ ಮೆರುಗನ್ನು ತಂದಿತ್ತ ಪಾಂಡಿತ್ಯಪೂರ್ಣ ಕವಿ ಕನಕದಾಸ. ಸಹಜ ಬದುಕಿನಿಂದ ಕೀರ್ತನರಾರರಾಗಿ,ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕನಕದಾಸರು ದಂಡನಾಯಕರಾಗಿದ್ದು, ಯುದ್ಧದಲ್ಲಿ ಸೋತ ನಂತರ ಅವರಿಗೆ ವೈರಾಗ್ಯ ಉಂಟಾಗಿ ಹರಿಭಕ್ತ ದಾಸರಾದರು ಎಂಬ ಮಾತಿದೆ.ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಭಕ್ತಿ,ವೈರಾಗ್ಯ, ಭಜನೆಗಳಷ್ಟೇ ಅಲ್ಲದೇ ಹದಿನಾರನೆಯ ಶತಮಾನದ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಸಮರ ಸಾರಿದ್ದಾರೆ. ಸಾಮಾಜಿಕ ಮಡಿವಂತಿಕೆಯನ್ನು ಕುರಿತು ತಮ್ಮ ಕೀರ್ತನೆಗಳಲ್ಲಿ ವಿಡಂಬಿಸಿದ್ದಾರೆ. ಅಂದಿನ ಸಮಾಜದ ಸ್ಥಿತಿಗತಿಗಳನ್ನು ತಿದ್ದುವ ಪ್ರಯತ್ನ ಮಾಡಿರುವ ದಾಸರಿವರು.

ಕನಕದಾಸರ ಜನನ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದ್ದರು, ಈ ಸಂದರ್ಭದಲ್ಲಿ ಶ್ರೀ ಕರಿಯಪ್ಪ ಚಿಗರಿ ಕಾರಟಗಿ ತಾಲೂಕು ವಾಲ್ಮೀಕಿ ಸಮಾಜದ ಉಪಾಧ್ಯಕ್ಷರು, ಶಾಂತಗೌಡ ಮಾಲಿಪಾಟೀಲ್, ಶಿವನಗೌಡ ಪೊಲೀಸ್ ಪಾಟೀಲ್, ಶ್ರೀ ಸಿದ್ದಪ್ಪ ಕಂಬಳಿ ಕೃಷಿ ಪ್ರಾಥಮಿಕ ಸಹಕಾರ ಸಂಘ ಅಧ್ಯಕ್ಷರು,ಬಸವರಾಜ ಹೊಸಕೇರ, ಗಂಗಪ್ಪ ಬೀ ಒಳಗಡೆ,ಕರಿಯಪ್ಪ ತಳವಾರ್, ಕರಿಯಪ್ಪ ಕರಡೋಣಿ, ನಾಗಪ್ಪ ನವಲಿ,ಬಸಪ್ಪ ಕರಡೋಣಿ, ನಿಂಗಪ್ಪ ಹಟ್ಟಿ, ಕರಿಯಪ್ಪ ತಳವಾರ್ ಅಜ್ಮೀರ್ ಸಾಬ್, ಮಂಜುನಾಥ ಹಟ್ಟಿ, ಗಂಗಪ್ಪ ಹಟ್ಟಿ,ಶೇಷಪ್ಪ, ನಾಗಪ್ಪ ಬಿ, ಊರಿನ ಹಿರಿಯರು ನಾಗರಿಕರು ಕುರುಬರು ಸಮಾಜದ ಮುಖಂಡರು ಯುವಕ ಮಂಡಳಿಯವರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!