ಹನೂರು:ತಾಲೂಕಿನ ಏರಿಕಾಡು (ಮಾರ್ಟಳ್ಳಿ)ಗ್ರಾಮದಲ್ಲಿ ಯೂತ್ ಕಮಿಟಿ ವತಿಯಿಂದ ಆಯೋಜಿಸಲಾಗಿದ್ದ ವಾಲಿಬಾಲ್ ಪ್ರೀಮಿಯಂ ಲೀಗ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಆರ್ ಮಂಜುನಾಥ್ ತಾಲೂಕಿನಲ್ಲಿ ಹಲವಾರು ಸಮಸ್ಯೆಗಳಿವೆ ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಭಾಗದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ವಾಲಿಬಾಲ್ ಕ್ರೀಡಾಂಗಣ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಪ್ರತಿಯೊಬ್ಬರೂ ಆರೋಗ್ಯದಿಂದಿರಲು ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಂಡು ಈ ಭಾಗದಲ್ಲಿ ಹೆಚ್ಚು ಕ್ರೀಡೆಗಳು ನಡೆಯಲಿ ಹೊಸ ವರ್ಷ ಎಲ್ಲರಿಗೂ ಶುಭ ತರಲಿ ಎಂದು ಕ್ರೀಡಾಭಿಮಾನಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಮೂರ್ತಿ,ಬಂಡಳ್ಳಿ ಜೇಸಿಂ,ಪೋನ್ನಾಚಿ ರಾಜು,ಹನೂರು ವಿಜಯ್ ಕುಮಾರ್,ಅತಿಕ್, ಜವಾದ್,ತಸ್ಲೀಮ್ ಊರಿನ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್




















