ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜಲ ಜೀವನ್ ಕಾಮಗಾರಿಗಳ ಪರಿಶೀಲನೆಗೆ ಟಾಸ್ಕ್ ಫೋರ್ಸ್ ರಚಿಸಿ:ಸಂಸದ ಅನಂತ ಕುಮಾರ್ ಹೆಗಡೆ

ಕಾರವಾರ:ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಲು ಟಾಸ್ಕ್ ಪೋರ್ಸ್ ತಂಡವನ್ನು ರಚಿಸಿ,ತಂಡದ ಎಲ್ಲಾ ಸದಸ್ಯರು ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿಯ ಕುರಿತಂತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಲೋಕಸಭಾ ಸದಸ್ಯ ಅನಂತ ಕುಮಾರ್ ಹೆಗಡೆ ನಿರ್ದೇಶನ ನೀಡಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಅಭಿವೃಧ್ದಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 967 ಕಾಮಗಾರಿಗಳನ್ನು ಕೈಗೆತ್ತಿಕೊಂಡು ಆಡಳಿತಾತ್ಮ ಅನುಮೋದನೆ ನೀಡಲಾಗಿದ್ದು, 866 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ,774 ಕಾಮಗಾರಿಗಳು ಪ್ರಾರಂಭಗೊಂಡು 520 ಕಾಮಗಾರಿಗಳು ಮುಕ್ತಾಯಗೊಂಡಿವೆ ಆದರೆ ಮುಕ್ತಾಯಗೊಂಡಿರುವ ಕಾಮಗಾರಿಯನ್ನು ಹಸ್ತಾಂತರ ಮಾಡಿಕೊಳ್ಳಲು ಹಲವು ಗ್ರಾಮ ಪಂಚಾಯತ್ ಗಳು ಒಪ್ಪುತ್ತಿಲ್ಲ ಎಂದು ದೂರುಗಳು ಬರುತ್ತಿದ್ದು,ಈ ಕುರಿತಂತೆ ಟಾಸ್ಕ್ ಪೋರ್ಸ್ ತಂಡವನ್ನು ರಚಿಸಿ,ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿಯನ್ನು ಪರಿಶೀಲನೆ ನಡೆಸುವಂತೆ ಸಂಸದರು ತಿಳಿಸಿದರು.
ಅಕ್ಷರ ದಾಸೋಹ ಯೋಜನೆಯಡಿ ವಿತರಿಸಲಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗದಂತೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳ ಸರಬರಾಜು ಆಗುವ ಕುರಿತು ಅಧಿಕಾರಿಗಳು ಪರಿಶೀಲಿಸಬೇಕು,ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಗೋಕರ್ಣ, ಮುರುಡೇಶ್ವರ,ಯಾಣ ಸೇರಿದಂತೆ ಎಲ್ಲಾ ಸ್ಥಳಗಳಲ್ಲಿ ಅತ್ಯಂತ ಕಟ್ಟುನಿಟ್ಟಾಗಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರುವಂತೆ ತಿಳಿಸಿದ ಸಂಸದರು, ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸೂಕ್ತ ರೀತಿಯಲ್ಲಿ, ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಆರೋಗ್ಯ ಇಲಾಖೆಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸಾಮಾಜಿಕ ಮಾಧ್ಯಮಗಳನ್ನು ವ್ಯವಸ್ಥಿತ ರೀತಿಯಲ್ಲಿ ಉಪಯೋಗಿಸಿಕೊಂಡು ಉತ್ತಮ ಸೇವೆ ಒದಗಿಸಬೇಕು,ವಿಶೇಷ ಚೇತನರಿಗೆ ನೀಡುವ ಯುಡಿಐಡಿ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಸಂಪೂರ್ಣ ಗುರಿ ಸಾಧಿಸುವಂತೆ ಸೂಚನೆ ನೀಡಿದರು.
ತೋಟಗಾರಿಕಾ ಇಲಾಖೆ ವತಿಯಿಂದ ಜೇನು ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶ ಸೃಷ್ಠಿ ಹಾಗೂ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಬೇಕು.ಅರಣ್ಯ ಇಲಾಖೆ ವತಿಯಿಂದ ಜೇನು ಮರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೆಡುವುದರ ಜೊತೆಗೆ ಸ್ಥಳೀಯ ಜೀವ ವೈವಿದ್ಯತೆ ವೃದ್ದಿಸುವ ಗಿಡಗಳನ್ನು ನಡೆಲು ಆದ್ಯತೆ ನೀಡಬೇಕು. ಭೀಮಾ ಬಾಂಬೂ ಮತ್ತು ಕಳಲೆಯನ್ನು ಬೆಳೆಯುವ ಕುರಿತಂತೆ ಹೆಚ್ಚಿನ ಅರಿವು ಮೂಡಿಸಬೇಕು. ಕೃಷಿ ಮತ್ತು ಅರಣ್ಯ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಸಾಮಾಜಿಕ ಅರಣ್ಯ ಇಲಖೆ ವತಿಯಿಂದ ಜಿಲ್ಲೆಯಲ್ಲಿ ನೆಟ್ಟಿರುವ ಗಿಡಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಹಾಗೂ ಕೌಶಲ್ಯಭಿವೃದ್ದಿ ಇಲಾಖೆಯ ಮೂಲಕ ಜಿಲ್ಲೆಯ ಯುವ ಜನತೆಗೆ ಹೆಚ್ಚಿನ ಕೌಶಲ್ಯ ತರಬೇತಿ ಹಾಗೂ ಉದ್ಯೋಗವಕಾಶಗಳನ್ನು ಒದಗಿಸುವಂತೆ ಮತ್ತು ಪಿಎಂ ವಿಶ್ವಕರ್ಮ ಯೋಜನೆಯನ್ನು ವ್ಯವಸ್ಥಿತ ರೀತಿಯಲ್ಲಿ ಜಾರಿಗೊಳಿಸುವಂತೆ ಸೂಚಿಸಿದ ಅವರು ಪೋಷಣ್ ಅಭಿಯಾನದಡಿಯಲ್ಲಿ ಅಗತ್ಯವಿರುವ ಅನುದಾನ ಬಿಡುಗಡೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಕುಮಟಾ ಶಾಸಕ ದಿನಕರ ಶೆಟ್ಟಿ, ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃಧ್ದಿ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್,ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ