ಕಲಬುರಗಿ:ಇಡೀ ದೇಶವೇ ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಅಶಾಂತಿ ಉಂಟು ಮಾಡಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆರೋಪಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ರಾಮ ಮಂದಿರದ ಉದ್ಘಾಟನೆ ಸಂಭ್ರಮವನ್ನು ಹದಗೆಡಿಸುವ ಉದ್ದೇಶದಿಂದ ಕಾಂಗ್ರೆಸ್ ಸರಕಾರ ಹಿಂದೂ ಕಾರ್ಯಕರ್ತರ 31 ವರ್ಷ ಹಳೆಯ ಪ್ರಕರಣವನ್ನು ಮುನ್ನೆಲೆಗೆ ತಂದು ಬಂಧಿಸುತ್ತಿರುವುದು ಖಂಡನೀಯ ಎಂದರು.ಅನೇಕ ವರ್ಷಗಳಿಂದ ಯಾವುದೇ ಕೋಮು-ಗಲಭೆ ಇಲ್ಲದೇ,ಈ ಭಾಗದಲ್ಲಿ ಶಾಂತಿ ನೆಲೆಸುವಂತಾಗಿದೆ.ಈಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹುಬ್ಬಳ್ಳಿ ಹಿಂದೂ ಕಾರ್ಯಕರ್ತರಾದ ರಾಜು ಧರ್ಮದಾಸ ಹಾಗೂ ಶ್ರಿಕಾಂತ ಪೂಜಾರಿಯವರನ್ನು ಬಂಧಿಸುವ ಮೂಲಕ ಕೋಮು ಗಲಭೆ ಸೃಷ್ಟಿಸುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.
65 ರಿಂದ 75 ವರ್ಷದ ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.ದೇಶದ ಹಿಂದೂಗಳು ತಾವು ಹಿಂದೂ ಎಂದು ಹೇಳಿಕೊಂಡರೆ,ಹಿಂದೂ ಧರ್ಮದ ರಕ್ಷಣೆಗೆ ಪ್ರತಿಭಟನೆ ಮಾಡಿದರೆ ತಪ್ಪೇನು? ಧರ್ಮ ದೇವಸ್ಥಾನ ಎಂದು ಹೇಳಿಕೆ ನೀಡಿದವರ ಮೇಲೆ ಪ್ರಕರಣ ದಾಖಲಿಸುತ್ತಿರುವುದು ಹಿಟ್ಲರ ಆಡಳಿತ ನೆನಪಿಸುತ್ತಿದೆ.ಇದೇ ರೀತಿ ಹಿಂದೂಗಳ ಮೇಲೆ ಮುಂದುವರಿದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.