ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಕೋ ಕೋ:ಚಾಂಪಿಯನ್ ಶಿಪ್ ಪಡೆದ ಶಿಗ್ಗಾವ್ ಪದವಿಕಾಲೇಜು

ಹಾವೇರಿ:ಶ್ರೀಮತಿ ಗೌರಮ್ಮ.ಬ.ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಗ್ಗಾವ 2023-24 ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಕೋ ಕೋ ಚಾಂಪಿಯನ್ಶಿಪ್ ಹಾಗೂ ಯುನಿವರ್ಸಿಟಿ ಬ್ಲೂಗೆ ಸತತವಾಗಿ ಎರಡನೆಯ ಬಾರಿ ಆಯ್ಕೆಯಾಗಿದೆ.
ಕಾಲೇಜಿನ ಹೆಮ್ಮೆಯ ವಿಷಯವಾಗಿರುವುದರಿಂದ ಚಾಂಪಿಯನ್ ಶಿಪ್ ಪಡೆದ ವಿದ್ಯಾರ್ಥಿಗಳಿಗೆ ಪರಮಪೂಜ್ಯ ಶ್ರೀ ಸಂಗನಬಸವ ಮಹಾಸ್ವಾಮಿಗಳು ವಿರಕ್ತಮಠ ಶಿಗಾವ್ ಇವರು ಪ್ರಶಸ್ತಿ ಹಾಗೂ ಟ್ರೋಫಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಪಾಠ ಪ್ರವಚನದೊಂದಿಗೆ ಪಠ್ಯೇತರ ಚಟುವಟಿಕೆಯಾದ ಕ್ರೀಡೆಯನ್ನು,ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಪ್ರತಿ ವರ್ಷ ತಮ್ಮ ಕ್ರೀಡಾ ಆಸಕ್ತಿಯೊಂದಿಗೆ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸುವುದರ ಮೂಲಕ ಕಾಲೇಜಿಗೆ ಚಾಂಪಿಯನ್ ಶಿಪ್ ತಂದು ಕೊಡಬೇಕೆಂದು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಚನ್ನಬಸಪ್ಪ ಎಸ್ ಕುಮ್ಮೂರ ಪ್ರಾಂಶುಪಾಲರು ಮಾತನಾಡಿ ಚಾಂಪಿಯನ್ ಶಿಪ್ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಇನ್ನುಳಿದ ವಿದ್ಯಾರ್ಥಿಗಳಿಗೂ ಸಹ ಕ್ರೀಡಾ ಮನೋಭಾವನೆಯನ್ನು ಬೆಳೆಸಲಾಗುತ್ತದೆಂದು ಹೇಳಿದರು.
ಈ ಕಾರ್ಯಕ್ರಮವನ್ನು ಡಾ.ಸುರೇಶ್ ವಾಲ್ಮೀಕಿ ಸ್ವಾಗತಿಸಿದರು.
ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು.ಪ್ರೊ.ಆನಂದ ಇಂದೂರು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು

ವರದಿ-ಮಂಜುನಾಥ ಪಾಟೀಲ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ