ಕೊಪ್ಪಳ:ಗಂಗಾವತಿ ತಾಲ್ಲೂಕಿನ ಆನೆಗುಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು,ಕೊಪ್ಪಳ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ಆರಂಭಿಸಿದ್ದು ಬೆಳೆಯುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ತುಂಗಭದ್ರಾ ಜಲಾಶಯದಿಂದ ಎಡದಂಡೆ ವಿಜಯನಗರ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.
ಬರಗಾಲದಿಂದ ಮೊದಲೇ ಸಂಕಷ್ಟಕ್ಕೆ ಸಿಲುಕಿದ್ದೇವೆ ಈಗ ನೀರು ಇಲ್ಲವಾದರೆ ಸಮಸ್ಯೆ ಇನ್ನಷ್ಟು ಗಂಭೀರವಾಗುತ್ತದೆ ಎಂದು ರೈತರು ಹೇಳಿದರು.
ಹುಲಿಗಿಯ ನೀರು ಬಳಕೆದಾರರ ಸಹಕಾರ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ರೈತರು ‘ಬೆಳಗಾವಿ ಅಧಿವೇಶನ ಸಮಯದಲ್ಲಿ ನಡೆದ ಸಭೆಯಲ್ಲಿ ನೀರು ಬಿಡುವುದಾಗಿ ಜನಪ್ರತಿನಿಧಿಗಳು ಭರವಸೆ ನೀಡಿದ್ದರು.ಇದೇ 10ರಿಂದ ನೀರು ಹರಿಸುವುದಾಗಿಯೂ ತಿಳಿಸಿ ಈಗ ಹಿಂದೇಟು ಹಾಕುತ್ತಿದ್ದಾರೆ ಎಂದು ರೈತರು ಆರೋಪಿಸಿದರು.ಈ ಸಂದರ್ಭದಲ್ಲಿ ರಾಂಪುರ,ಮಲ್ಲಾಪುರ,ಸಂಗಾಪುರ, ಕೊರಮ್ಮಕ್ಯಾಂಪ್,ಗೂಗಿಬಂಡಿ,ಹನುಮನಹಳ್ಳಿ, ರಂಗಾಪುರ,ಕಡೇಬಾಗಿಲು ಸೇರಿದಂತೆ ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.
ವರದಿ:ಮಲ್ಲಿಕ್ ಎಮ್ ಕೊಪ್ಪಳ