ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಡಗರ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಣೆಗೆ ಸಿದ್ದತೆ ಕೈಗೊಳ್ಳಿ:ಜಿಲ್ಲಾಧಿಕಾರಿ ಡಾ.ಸುಶೀಲ.ಬಿ.

ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

ಯಾದಗಿರಿ:ಜನವರಿ 26 ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜರುಗಿದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದು ರಾಷ್ಟ್ರೀಯ ಹಬ್ಬ ಎಲ್ಲರ ಪಾಲ್ಗೊಳ್ಳುವಿಕೆ ಬಹು ಮುಖ್ಯವಾಗಿದೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು,ಬೆಳಿಗ್ಗೆ 9 ಗಂಟೆಗೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ತಾಲ್ಲೂಕುಗಳಲ್ಲಿಯೂ ಆಯಾ ವ್ಯಾಪ್ತಿಯ ತಹಶೀಲ್ದಾರರು ಗಣರಾಜ್ಯೋತ್ಸವ ದಿನಾಚರಣೆಯನ್ನು ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿ
ಜಿಲ್ಲೆಯಾದ್ಯಂತ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ವೇದಿಕೆ ಸಿದ್ದತೆ,ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು,ಆಹ್ವಾನ ಪತ್ರಿಕೆ ಮುದ್ರಿಸಬೇಕು,ಶಾಮಿಯಾನ,ವಿದ್ಯಾರ್ಥಿ,ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ನುರಿತ ವೈದ್ಯರೊಂದಿಗೆ ಅಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಬೇಕು. ಮೈದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ,ಸ್ವಚ್ಛತೆ ನಿರ್ವಹಿಸಬೇಕು ದೀಪಾಲಂಕಾರ,ಇನ್ನಿತರ ಕಾರ್ಯಕ್ರಮ ಕುರಿತು ಭಾವೈಕ್ಯತಾ ಸಮಿತಿ ಹಾಗೂ ಡಿಡಿಪಿಐ ಸಮನ್ವಯತೆಯಿಂದ ಕ್ರಮ ಕೈಗೊಳ್ಳಬೇಕು. ಸರ್ಕಾರೇತರ ಸಂಘ ಸಂಸ್ಥೆಗಳವರು, ಭಾಗವಹಿಸಬೇಕು.ವಿವಿಧ ಸಮಿತಿಗಳನ್ನು ರಚಿಸಲು ಹಾಗೂ ಸಂಬಂಧಿಸಿದ ಸಮಿತಿಯ ಅಧಿಕಾರಿಗಳ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಪೊಲೀಸ್ ಇಲಾಖೆ,ಅಗ್ನಿಶಾಮಕ,ಅಬಕಾರಿ ಇಲಾಖೆ, ಭಾರತೀಯ ಸೇವಾದಳ,ಗೃಹ ರಕ್ಷಕ ದಳ,ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಕವಾಯತು ತಂಡಗಳನ್ನು ಪರೇಡ್ ನಲ್ಲಿ ಭಾಗವಹಿಸಿ ಅತ್ಯುತ್ತಮವಾಗಿ ನಡೆಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ,ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ,ಜಿಲ್ಲಾ ಪಂಚಾಯತ ಸಿಪಿಓ ಗುರುನಾಥ ಗೌಡಪ್ಪನ್ನೋರ್,ಪೊಲೀಸ್ ಇನ್ಸಪೆಕ್ಟರ್ ದೇವಿಂದ್ರಪ್ಪ,ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ,ಭಾವೈಕ್ಯತಾ ಸಮಿತಿ ಸದಸ್ಯರಾದ ಚನ್ನಪ್ಪಗೌಡ ಮೋಸಂಬಿ,ಬಾಬು ದೋಖಾ,ವಿಶ್ವನಾಥ ಸಿರವಾರ,ಮರೆಪ್ಪ ಚಟ್ಟೆರಕರ್,ರಾಷ್ಟ್ರೀಯ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ತಾಜಮೂಲ್ ಹುಸೇನ್, ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ:ಶಿವರಾಜ್ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ