ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿ ಇಂದು ಸಂಜೆ 4:00ರ ಸಮಯದಲ್ಲಿ ಆರ್ ಎ ಎಫ್ ಮತ್ತು ಹೊನ್ನಾಳಿ ಠಾಣೆಯ ಪೊಲೀಸ್ ಪಥ ಸಂಚಲನ
ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಯ ಪ್ರತಿಷ್ಠಾಪನೆ ಇರುವುದರಿಂದ ಇಂದು ದಾವಣಗೆರೆ ಜಿಲ್ಲೆಯ ಎಸ್ ಪಿ ಉಮಾ ಪ್ರಶಾಂತ್ ಇವರ ಮಾರ್ಗದರ್ಶನದಲ್ಲಿ ಹೊನ್ನಾಳಿಯ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು.ಸೋಮವಾರದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳುವಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು ಅದರಂತೆ ಈ ಪಥಸಂಚಲದಿಂದ ನಿಮ್ಮೊಂದಿಗೆ ನಾವು ಇದ್ದೇವೆ ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿ ಕೊಡದೆ ಧೈರ್ಯದಿಂದ ಇರಿ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು
ಈ ಸಂದರ್ಭದಲ್ಲಿ ಹೊನ್ನಾಳಿ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸುನೀಲ್ ಕುಮಾರ್
ಮತ್ತು ಆರ್ ಎ ಎಫ್ ತಂಡದ ಕಮಾಂಡೋ ಸುನೀಲ್ ಮತ್ತು ಹೊನ್ನಾಳಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಜರಿದ್ದರು.
ವರದಿ-ಪ್ರಭಾಕರ ಡಿ ಎಂ ಹೊನ್ನಾಳಿ