ಕಲಬುರಗಿಯ ಕೋಟನೂರದಲ್ಲಿ ಅಂಬೇಡ್ಕರ ಪುತ್ಥಳಿಗೆ ಅವಮಾನ ಮಾಡಿರುವುದು ಖಂಡನೀಯ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಆರೋಪಿಗಳನ್ನು ಬಂಧನವಷ್ಟೇ ಅಲ್ಲ.ಅವರಿಗೆ ಕಠಿಣ ಶಿಕ್ಷೆ ಆಗಬೇಕು ಭಾರತದ ಸಂವಿಧಾನ ಶಿಲ್ಪಿ ಜಗತ್ತು ಕಂಡ ಮಹಾನ್ ವ್ಯಕ್ತಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ ಆರೋಪಿಗಳನ್ನು ಪೋಲಿಸರು ಕಠಿಣ ಶಿಕ್ಷೆಗೆ ಗುರಿಪಡಿಸಿ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಡಾ.ಅಂಬೇಡ್ಕರ್ ಅವರು ಭಾರತೀಯರ ಪಾಲಿಗೆ ಆರಾಧ್ಯ ದೈವ ಅವರನ್ನು ಅವಮಾನಿಸುವುದು ಎಂದರೆ ಇಡೀ ನಾಗರಿಕ ಸಮಾಜ ತಲೆ ತಗ್ಗಿಸಿದಂತೆ ಎಲ್ಲಾ ಸಮುದಾಯದ ಪಾಲಿಗೆ ಅವರು ಮಹಾಮಾನವತಾದಿ ಆಗಿದ್ದಾರೆ ಅಂತಹ ವ್ಯಕ್ತಿ ಇಡೀ ಜಗತ್ತಿನಲ್ಲಿ ಮತ್ತೊಬ್ಬರಿಲ್ಲ ಆದರೆ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನಿಸುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ದುಸ್ಸಾಹಸಕ್ಕೆ ಕೈ ಹಾಕಿರುವ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ಇನ್ನೂ ಮುಂದೆ ಇಂತಹ ಘಟನೆಗಳನ್ನು ನಡೆಯದಂತೆ ಸರಕಾರ ನೋಡಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪುತ್ಥಳಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಸೌಹಾರ್ಧಕ್ಕೆ ದಕ್ಕೆ ತರಬಾರದು ಶಾಂತಿ ಕದಡುವ ಪ್ರಯತ್ನ ನಡೆಯದಂತೆ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.