ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.
ಕಾರ್ಯಕ್ರಮವನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ವೆಂಕಟೇಶ ಮಡಿವಾಳ ಅವರು ಶ್ರೀ ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು,ಭಾಷಣಗಳು,ವೇಷಭೂಷಣಗಳು, ಆಟೋಟಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆಯುವುದು ಇನ್ನಿತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಅಭೂತಪೂರ್ವಕವಾಗಿ ಯಶಸ್ವಿಗೊಳಿಸಿದರು.
ಇದೇ ವೇಳೆ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಲು ಧ್ವನಿವರ್ಧಕದ ವ್ಯವಸ್ಥೆ,ಸಾಂಸ್ಕೃತಿಕ ಕಾರ್ಯಕ್ರಮಗಳ ವ್ಯವಸ್ಥೆ,ಅತಿಥಿಗಳಿಗೆ ಕುಳಿತುಕೊಳ್ಳುವ ವ್ಯವಸ್ಥೆ,ಉಪಹಾರ ವ್ಯವಸ್ಥೆ ಹೀಗೆ ಹಲವಾರು ರೀತಿಯ ಕಾರ್ಯಗಳನ್ನು ಮಾಡುವಲ್ಲಿ ಸಹಕಾರಿಗಳಾದರು.ಇದೇ ಸಂದರ್ಭದಲ್ಲಿ SDMC ಸದಸ್ಯರು,ಗ್ರಾಮ ಪಂಚಾಯತಿ ಸದಸ್ಯರು,ಹಳೆಯ ವಿದ್ಯಾರ್ಥಿಗಳೆಲ್ಲರೂ ಮಕ್ಕಳ ಕಲೆಯನ್ನು ಇನ್ನಷ್ಟು ಉತ್ತೇಜಿಸಲು ಕ್ರೀಡಾಕೂಟದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರಿಗೆ ಬಹುಮಾನಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಸದಸ್ಯರು,ಗ್ರಾಮ ಪಂಚಾಯತಿ ಸದಸ್ಯರು,ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು,ಶಾಲೆಯ ಆಡಳಿತ ಮಂಡಳಿ,ಊರಿನ ಹಿರಿಯರು, ಯುವಕರು,ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.