ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂಬಳಿ ಗ್ರಾಮ ಪಂಚಾಯಿತಿಯಲ್ಲಿ 75 ನೇ ಗಣರಾಜೋತ್ಸವ ಕಾರ್ಯಕ್ರಮ

ಕೊಟ್ಟೂರು:ತಾಲೂಕಿನ ಅಂಬಳಿ ಗ್ರಾಮ ಪಂಚಾಯಿತಿಯಲ್ಲಿ 75 ನೇ ಗಣರಾಜೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಗ್ರಾಮಪಂಚಾಯಿತಿ ಅಧ್ಯಕ್ಷರಾದ ಹೊಳಲಮ್ಮ ಹನುಮಂತಪ್ಪ ರವರು ಧ್ವಜರೋಹಣ ಮಾಡುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿ ಭಾರತ ಸಂವಿಧಾನವು 1949 ರ ನವೆಂಬರ್ 26 ರಂದು ಅಂಗೀಕಾರವಾಗಿ,1950 ರ ಜನವರಿ 26 ರಂದು ಜಾರಿಗೆ ಬಂತು.ಈ ದಿನದ ಗೌರವಾರ್ಥವಾಗಿ ಪ್ರತಿ ವರ್ಷ ಜನವರಿ 26 ರಂದು ಭಾರತದಲ್ಲಿ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಟಿ.ಕೊಟ್ರಮ್ಮ ಮಾರುತಿ ರವರು ಮಾತನಾಡಿ
ದೇಶದ ವಿವಿಧ ಭಾಗಗಳಲ್ಲಿ ರಕ್ಷಣಾ ಪಡೆಗಳು ಪರೇಡ್‌ ಮಾಡುವ ಮೂಲಕ,ಶಾಲೆಗಳು,ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಮಾರಂಭಗಳು ನಡೆಯುತ್ತವೆ.
ಈ ಕಾಯ೯ಕ್ರಮವನ್ನು ಉದ್ದೇಶಿಸಿ ಪ್ರಥಮ ದಜೆ೯ಯ ಗುತ್ತಿಗೆದಾರರಾದ ವಿ ಬಸವರಾಜ ರವರು ನವದೆಹಲಿಯ ಕರ್ತವ್ಯ ಪಥದಲ್ಲಿ ರಕ್ಷಣಾ ಪಡೆಗಳು ಅತ್ಯಂತ ಭವ್ಯವಾದ ಪರೇಡ್‌ ಮೆರವಣಿಗೆಯನ್ನು ನಡೆಸುತ್ತವೆ. ಈ ಸುದಿನದಂದು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ಸ್ಮರಿಸಲು ನಾಗರೀಕರೆಲ್ಲರೂ ಒಟ್ಟಾಗಿ ಸೇರುತ್ತೇವೆ ಎಂದರು.
ಗ್ರಾಮ ಪಂಚಾಯತಿಯ ಸದಸ್ಯರಾದ ಬಿ ಸಣ್ಣ ಬಸವರಾಜ ರವರು ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ದಿನವನ್ನು ಅತ್ಯಂತ ಉತ್ಸಾಹ ಮತ್ತು ದೇಶಭಕ್ತಿಯ ಭಾವನೆಗಳಿಂದ ಆಚರಿಸಲಾಗುತ್ತದೆ ಎಂದರು ಎನ್ ವಿರುಪಾಕ್ಷಿ,ಟಿ ಶಿವಣ್ಣ ನವರು ಧ್ವಜಾರೋಹಣ,ಸಾಂಸ್ಕೃತಿಕ ಕಾರ್ಯಕ್ರಮಗಳು,ಭಾಷಣಗಳು,ಪ್ರಬಂಧ ಸ್ಪರ್ಧೆ, ಇತರೆ ಚಟುವಟಿಕೆಗಳೊಂದಿಗೆ ಈ ದಿನವನ್ನು ಸ್ಮರಣೀಯವಾಗಿಸಲಾಗುತ್ತದೆ ಎಂದು ಹೇಳಿದರು.
ಮಾಜಿ ಅಧ್ಯಕ್ಷರಾದ ಅನುಸೂಯಮ್ಮಗೊಣೇಪ್ಪ ಮತ್ತು ಉಪಾಧ್ಯಕ್ಷರಾದ ವಿ ಗಂಗಮ್ಮ ಬಸವರಾಜ ರವರು ಡಾ” ಬಾಬಸಾಹೇಬ ಅಂಬೇಡ್ಕರ್ ರವರು ಸಂವಿಧಾನವನ್ನು ಎಲ್ಲಾ ಜಾತಿ,ಧಮ೯,ಭಾಷೆಗಳಿಗೆ ಅನುಗುಣವಾಗಿ ರಚಿಸಿದರು‌.
ಗ್ರಾಮ ಪಂಚಾಯತಿಯ ಪಿಡಿಓ ದೇವೇಶ ಮತ್ತು ಕಾಯ೯ದಶಿ೯ ಪ್ರದೀಪ್ ರವರು ಇದೊಂದು ಬೃಹತ್‌ ಸಂವಿಧಾನವಾಗಿದ್ದು,ಇದರ ಜಾರಿಗೆ ಮಹತ್ವದ ಕೊಡುಗೆ ನೀಡಿದವರು ಡಾ ಬಿ.ಆರ್‌.ಅಂಬೇಡ್ಕರ್‌ ರವರು‌ಆದ್ದರಿಂದ ಅಂಬೇಡ್ಕರ್‌ ರನ್ನು ಭಾರತ ಸಂವಿಧಾನದ ಪಿತಾಮಹರು ಎನ್ನುವರು‌ ಎಂದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರು, ಸಿಬ್ಬಂದಿಗಳು,ಸಾವ೯ಜನಿಕರು,ಊರಿನ ಮುಖಂಡರು ಉಪಸ್ಥಿತರಿದ್ದರು.

ವರದಿ:ವೈ.ಮಹೇಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ