ಬೀದರ್:ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಅರಣ್ಯ,ಜೈವಿಕ ಮತ್ತು ಪರಿಸರ ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ ಸರ್ವರಿಗೂ ಸಮಾನತೆ,ಸಮಪಾಲು ಹಾಗೂ ಸಮಬಾಳು ನೀಡಿದೆ ಪ್ರಜಾಪ್ರಭುತ್ವ ವ್ಯವಸ್ಥೆ 75 ವರ್ಷವಾದರೂ ಗಟ್ಟಿಯಾಗಿ ನಿಲ್ಲಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಬೃಹತ್ ಲಿಖಿತ ಸಂವಿಧಾನವೇ ಕಾರಣವಾಗಿದೆ ಎಂದು ಹೇಳಿದರು ತದನಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ವಿಶ್ವಕ್ಕೆ ಶಾಂತಿ ಮತ್ತು ಸಮಾನತೆಯನ್ನು ಸಾರಿದ ಬುದ್ಧ ಮತ್ತು ಬಸವಣ್ಣನವರ ಹಾಗೂ ಸಂವಿಧಾನ ಪಿತಾಮಹ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ಪೀಠಿಕೆ ಓದುತ್ತಿರುವ ಸ್ತಬ್ದಚಿತ್ರ ಎಲ್ಲರ ಗಮನ ಸೆಳೆಯಿತು.
ವರದಿ:ಸಾಗರ್ ಪಡಸಲೆ