ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಬ್ಬರಗಿಯಲ್ಲಿ 75 ನೇ ವಿಜೃಂಭಣೆಯ ಗಣರಾಜ್ಯೋತ್ಸವ

ಕೊಪ್ಪಳ/ಕುಷ್ಟಗಿ:ತಾಲ್ಲೂಕಿನ ಕಬ್ಬರಗಿಯ ಸರಕಾರಿ ಪ್ರೌಢಶಾಲೆಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ಶ್ರೀ ಮೈಲಾರಪ್ಪ ಹಾದಿಮನಿ ಅವರು ಮಾತನಾಡಿ ಸಂವಿಧಾನವು ಬಡವ ಬಲ್ಲಿದ ಮೇಲು ಕೀಳು ಜಾತಿ ಧರ್ಮ ಎಂಬ ಬೇಧವಿಲ್ಲದೆ ಈ ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನವಾದ ಹಕ್ಕು ಮತ್ತು ಅವಕಾಶಗಳನ್ನು ನೀಡಿದೆ. ನಮ್ಮ ದೇಶದ ಸಂವಿಧಾನವು ವಿಶ್ವದ ಇತರ ಎಲ್ಲ ರಾಷ್ಟ್ರಗಳಿಗೆ ಮಾದರಿಯಾಗಿದೆ.ಈ ಸಂವಿಧಾನ ಜಾರಿಗೆ ಬರಲು ಕಾರಣರಾದ ಎಲ್ಲರನ್ನೂ ನಾವು ಸ್ಮರಿಸಬೇಕು ಎಂದರು.
ಚಿತ್ರಕಲಾ ಶಿಕ್ಷಕ ತಿರುಪತಿ ಚಲವಾದಿ ಗಣರಾಜ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಬೃಹತ್ ಗಾತ್ರದ ಸಂವಿಧಾನ ಗ್ರಂಥದ ಮಾದರಿ,ಹಿಮಾಲಯ ಪರ್ವತದ ಮಾದರಿ ಹಾಗೂ ಬೃಹತ್ ಗಾತ್ರದ ಸಂವಿಧಾನ ಪೀಠಿಕೆಯ ಪ್ರದರ್ಶನ ಹಿನ್ನೆಲೆಯಲ್ಲಿ ಕೇಸರಿ ಬಿಳಿ ಹಸಿರು ಬಣ್ಣಗಳ ಬಟ್ಟೆಗಳನ್ನು ಬಳಸಿ ಆಕರ್ಷಣೀಯವಾಗಿ ಕಾಣುವಂತೆ ಮಾಡಿದ್ದರು ಇವರ ಕಾರ್ಯವನ್ನು ಮುಖ್ಯೋಪಾಧ್ಯಾಯರು ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಗ್ರಾಮದ ಗಣ್ಯರು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಶಿಕ್ಷಕ ಬಸವರಾಜ ಕೊರ್ತಿ ಹಾಗೂ ಸಮಾಜ ವಿಜ್ಞಾನ ಶಿಕ್ಷಕ ಚಿದಾನಂದ ಕಸ್ತೂರಿ ಮಾರ್ಗದರ್ಶನದಲ್ಲಿ ರಂಗೋಲಿಯಲ್ಲಿ ವಿವಿಧ ನಕ್ಷೆ ಮತ್ತು ವಿಜ್ಞಾನದ ಚಿತ್ರಗಳನ್ನು ಬಿಡಿಸಿದ್ದರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂವಿಧಾನ ಗ್ರಂಥದ ಬೃಹತ್ ಮಾದರಿ ಹಾಗೂ ಸಂವಿಧಾನ ಪೀಠಿಕೆಗಳನ್ನು ಜಾಥಾದ ಮೂಲಕ ಪ್ರದರ್ಶನ ಮಾಡಲಾಯಿತು ದೈಹಿಕ ಶಿಕ್ಷಕ ಸಂಗಮೇಶ ತೆಗ್ಗಿನಮನಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಲೇಜಿಮ್ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಶಿಕ್ಷಕರಾದ ಚನ್ನಪ್ಪ ಅಂಬಿಗೇರ ಪ್ರಾರ್ಥಿಸಿದರು ಸುಖಮುನಿ ಆಂದೇಲಿ ಸ್ವಾಗತಿಸಿದರು‌ ಪ್ರಶಾಂತ ವಗ್ಯಾನವರ ಬಹುಮಾನ ವಿತರಣೆ ಕಾರ್ಯಕ್ರಮ ನಿರ್ವಹಿಸಿದರು.ಶರಣಪ್ಪ ಅಧಿಕಾರಿ ವಂದಿಸಿದರು ಶಿವಪ್ರಕಾಶ್ ಸಜ್ಜನ ಕಾರ್ಯಕ್ರಮ ನಿರೂಪಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ