ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಪಂಡಿತ್ ಜವಾಹರಲಾಲ್ ನೆಹರುರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರು ಪ್ರೋಫೆಸರ ಶ್ರೀ ಶ್ರೀಶೈಲ ದೇಗೌಡ ಸರ್ ಅವರು ಮಾತನಾಡಿ ಭಾರತದಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನವಾದ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ.ನೆಹರು ಅವರ ಮರಣದ ನಂತರ, ಅವರ ಜನ್ಮದಿನದ ಸವಿನೆನಪಿಗಾಗಿ ನವೆಂಬರ್ 14ರಂದು ಭಾರತದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ.
ಭಾರತದ ಮಕ್ಕಳ ಸ್ಥಿತಿಗತಿ ಹಾಗೂ ಭವಿಷ್ಯದ ದೃಷ್ಟಿಯಿಂದ ಅವರು ಕಂಡ ಕನಸಿನಂತೆ, ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರೂರವರ ಜನ್ಮ ದಿನದಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ.
ಈ ಒಂದು ಶುಭ ಸಂದರ್ಭದಲ್ಲಿ ಮಕ್ಕಳಲ್ಲಿ ನನ್ನ ವಿಶೇಷ ವಿನಂತಿ ಏನೆಂದರೆ, ಪಾಶ್ಚಿಮಾತ್ಯ ಸಂಸ್ಕೃತಿಗೆ ಒಳಪಡದೇ ದೇಶೀಯ ಸಂಸ್ಕೃತಿಯನ್ನು ಅನುಕರಿಸಿ ಬೆಳೆಯಬೇಕು. ಜೊತೆಗೆ ದುಷ್ಟ ಅಭ್ಯಾಸಗಳಿಂದ ದೂರವಿದ್ದು, ಆಟ – ಪಾಠ – ಸಂಗೀತಗಳ ಕಡೆಗೆ ಹೆಚ್ಚಿನ ಒಲವನ್ನು ತೋರಿಸಬೇಕು. ದೇಶದ ಭವಿಷ್ಯದ ಆಸ್ತಿಯಾಗಿರುವ ಮಕ್ಕಳು ದೇಶದ ಬಗ್ಗೆ ಸದಾ ಭಕ್ತಿ ಭಾವನೆಯನ್ನು ಹೊಂದಿ ಉತ್ತಮ ಪ್ರಜೆಗಳಾಗಲಿ ಎಂದು ಈ ಶುಭ ದಿನದಂದು ಶುಭ ಹಾರೈಸುತ್ತಾ, ದೇಶದ ಎಲ್ಲಾ ಮಕ್ಕಳಿಗೆ ಮತ್ತೊಮ್ಮೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೇನೆ.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.