ಕಲಬುರಗಿ:ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ಮಾದರಿ ಕೂಸಿನ ಮನೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ಸಂಪೂರ್ಣ ಶ್ರೀನಿವಾಸ ಬಣಕ್ಕಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು,ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ,ಪೋಷಣೆ ಮಾಡುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರು ‘ಕೂಸಿನ ಮನೆ’ (ಶಿಶು ಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಂ.ಪಂ ಸದಸ್ಯರಾದ ಸುನೀಲ ಎಂ. ಅಮ್ಮಗೋಳ,ಇಸ್ಮಾಯಿಲ್ ನಿಗೇವಾನ,ರಾಜು ಬಿಚ್ಚಾ,ಮುಖಂಡರಾದ ಎಸ್ ಡಿ ಎಂ ಸಿ ಅಧ್ಯಕ್ಷ ಕಲ್ಯಾಣಿ ಹಡಪದ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತಿತರರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.