ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರಾಜಾ ವೆಂಕಟಪ್ಪ ನಾಯಕ ರವರು ಇಂದು ಬೆಂಗಳೂರುನ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣರವರು,ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ಗೌಡ ದರ್ಶನಾಪೂರರವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಎನ್.ಇ.ಕ್ರಾಂತಿಯವರು ಮತ್ತು ಹಿರಿಯ ಮುಖಂಡರುಗಳು,ಸುರಪುರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ವಿವಿಧ ಇಲಾಖೆಯ ನಾಮನಿರ್ದೇಶನ ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್