ಯಡ್ರಾಮಿ ಸುದ್ದಿ:ಇತ್ತೀಚಿನ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಿ ಹೋಗುತ್ತಿವೆ ಹಾಗೂ ಹೆಣ್ಣು ಮಕ್ಕಳ ಮೇಲೆ ಅಮಾನವೀಯ ಅಸಭ್ಯ ವರ್ತನೆ ಹಾಗೂ ಲೈಂಗಿಕ ಶೋಷಣೆ ನಡೆಯುತ್ತಿರುವುದು ಖೇದಕರ ಸಂಗತಿ ಇದನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯದ ಪ್ರತಿಯೊಂದು ಪ್ರೌಢಶಾಲೆಯಲ್ಲಿ ಕರಾಟೆ ಸ್ವಯಂ ರಕ್ಷಣಾ ತರಬೇತಿ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಈ ಕಲೆಯನ್ನು ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಬೇಕು ಎಂದು ಜೇವರ್ಗಿ ತಾಲೂಕ ಜನ್ನ ಶೀಟೋರಿಯೋ ಕರಾಟೆ ಅಸೋಸಿಯೇಷನ್ ತಾಲೂಕ ಅಧ್ಯಕ್ಷರಾದ ಜಟ್ಟಪ್ಪ ಎಸ್.ಪೂಜಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅದೇ ರೀತಿಯಾಗಿ ಕರಾಟೆ ಶಿಕ್ಷಕರಾದ ಸೇನಸೈ ಮಾಳಪ್ಪ ಎಸ್.ಪೂಜಾರಿ ಬಿಳವಾರ್ ಅವರು ಯಲಗೊಡ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಶ್ರೀ ಸಿದ್ದಪ್ಪ ಪೂಜಾರಿ,ಶ್ರೀ ಗುರುಶಾಂತಯ್ಯ ಚಿಕ್ಕಮಠ,ಶ್ರೀ ಶಾಂತ ಕುಮಾರ ಸಂಗಾಲಕ್,ಶ್ರೀಮತಿ ಬಸಲಿಂಗಮ್ಮ ದಾದಾಗೋಳ,ಶ್ರೀ ಭೀಮನಗೌಡ ಬಿರಾದರ್,ಶ್ರೀ ಶರಣು ಪೂಜಾರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.