ಕಲಬುರಗಿ:ರಾಮ ಮಂದಿರ ಹೋರಾಟದ ರೂವಾರಿ, ಬಿಜೆಪಿ ಪಕ್ಷದ ಭೀಷ್ಮ,ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದಕ್ಕೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದರು.ದೇಶದ ಅಭಿವೃದ್ಧಿ ಹಾಗೂ ಪ್ರಗತಿಪರ ಕೆಲಸಗಳಿಗೆ ದಾರಿ ಹಾಕಿದ ಮಹಾನ ನಾಯಕನಿಗೆ ರಾಷ್ಟ್ರದ ಅತ್ಯುನ್ನತ ಗೌರವ ಲಭಿಸಿರುವುದು ಸಂತಸದ ಸಂಗತಿ.ಅವರ ಮಾರ್ಗದರ್ಶನ ನಮಗೆ ಮಾದರಿಯಾಗಿದೆ ಎಂದರು ಬಿಜೆಪಿ ಪಕ್ಷದ ನಾಯಕರಾಗಿ ಹಾಗೂ ಉಪಪ್ರಧಾನಿಯಾಗಿ ರಾಷ್ಟ್ರದ ಏಳಿಗೆಗೆ ಅಭೂತಪೂರ್ವ ಕಾರ್ಯಗಳನ್ನು ಕೈಗೊಂಡಿದ್ದಾರೆ.
ರಾಜ್ಯಸಭೆ ಸದಸ್ಯ ಸ್ಥಾನ,ಭಾರತೀಯ ಜನಸಂಘದ ಅಧ್ಯಕ್ಷ ಗೌರವ,ಮಾಹಿತಿ ಮತ್ತು ಪ್ರಸಾರ ಸಚಿವ,ಗೃಹ ಮಂತ್ರಿ ಹಾಗೂ ಬಿಜೆಪಿ ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.ದೇಶಕ್ಕೆ ಅವರು ನೀಡಿದ ಕೊಡುಗೆಗಳನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ ಇಂತಹ ಹಿರಿಯ ನಾಯಕರಿಗೆ ಭಾರತ ರತ್ನ ಪ್ರಶಸ್ತಿ ನೀಡುತ್ತಿರುವುದು ಖುಷಿಯ ವಿಚಾರವಾಗಿದೆ ಎಂದು ಅವರು ಹೇಳಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.