ಪತ್ರಕರ್ತ ನಾಗರಾಜ್ ನಿಧನ : ಸಂತಾಪ
ಭದ್ರಾವತಿ: ಹಿರಿಯ ಪತ್ರಕರ್ತ, ತಾಲ್ಲೂಕಿನ ಕಾರೆಹಳ್ಳಿ ಗ್ರಾಮದ ನಿವಾಸಿ ನಾಗರಾಜ್(69) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೂಲತಃ ಶಿಕ್ಷಕರಾಗಿದ್ದ ನಾಗರಾಜ್ ರವರು ಸುಮಾರು 15 ವರ್ಷಗಳಿಗೂ ಹೆಚ್ಚು ಕಾಲದಿಂದ ಜಿಲ್ಲೆಯ ಹಲವು ಸ್ಥಳೀಯ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.
ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿ ವಿಶ್ರಾಂತಿ ಪಡೆಯುತ್ತಿದ್ದರು. ಇವರ ನಿಧನಕ್ಕೆ ನಗರದ ಪತ್ರಕರ್ತರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.