ಹನೂರು:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಹಾಗೂ ಚಿಕ್ಕ ಮಾಲಪುರ ಗ್ರಾಮ ಪಂಚಾಯಿತಿ ಇವರ ಸಹಯೋಗದೊಂದಿಗೆ ಇಂದು ಚಿಕ್ಕ ಮಾಲಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಊರಿನ ಮುಖಂಡರು ಪುಷ್ಪಾರ್ಚನೆ ಮಾಡಿದ ನಂತರ ಮುಖಂಡರು ಅಧಿಕಾರಿಗಳು ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಿ ನಂತರ ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಎದ್ದು ನಿಂತು ಹೇಳಿದರು.
ಚಾಮಮ್ಮ ಗ್ರಾಮ ಪಂಚಾಯತಿ ಅಧ್ಯಕ್ಷೆ,ಕೇಶವ ಮೂರ್ತಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು,ಮಹೇಶ್ ಕೆ,ಅಶೋಕ್ ನಾಯಕ್,ಗಿರೀಶ್ ಅರಣ್ಯ ಅಧಿಕಾರಿ,ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಭು ಸ್ವಾಮಿ,ಗುರು ಮೂರ್ತಿ,ಗೀತಾ,ಕಲಾವತಿ,ಮಾದೇಶ್,ಪುಷ್ಪ ಅಂಕರಾಜು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಾದೇವ ಪ್ರಭು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್