ರಾಯಚೂರು:ಆಶಿಹಾಳ ತಾಂಡಾ ಭಾರತ ರತ್ನ ಡಾ:ಬಿ,ಆರ್ ಅಂಬೇಡ್ಕರ್ ವಸತಿ ನಿಲಯ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ನೆರವೇರಿತು.
ಲಿಂಗಸೂಗೂರು ತಾಲೂಕಿನ ಆಶಿಹಾಳ ತಾಂಡಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಬೇಸಿಗೆಯಲ್ಲಿ ಗಿಡಮರಗಳ ರಕ್ಷಣೆ ಮಾಡುವ ಉದ್ದೇಶದಿಂದ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಸಿನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾಧ್ಯಕ್ಷ ಅಮರೇಗೌಡ ಮಲ್ಲಾಪುರ ಅವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ,ಪರಿಸರವನ್ನು ನಾವು ರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ.ಕಾರಣ ಎಲ್ಲಾ ವಿದ್ಯಾರ್ಥಿಗಳು ಇದನ್ನ ಮನವರಿಕೆ ಮಾಡಿಕೊಂಡು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಮತ್ತು ಈಗಾಗಲೇ ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು,ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಗಿಡಮರಗಳು ಒಣಗುತ್ತಿವೆ.ಪ್ರಾಣಿ ಪಕ್ಷಿಗಳಿಗೂ ನೀರಿನ ದಾಹ ಹೆಚ್ಚಾಗುತ್ತಿದೆ ಪ್ರತಿಯೊಬ್ಬರೂ ದಿನನಿತ್ಯ ಗಿಡಮರಗಳಿಗೆ ನೀರುಣಿಸಬೇಕು,ಪ್ರಾಣಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆಗಳನ್ನು ಅಳವಡಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಗೀತಾ ರೂಪಸಿಂಗ್ ನಾಯಕ ಅವರ ಪುತ್ರ ಪ್ರೀತಮ್ ನಾಯಕ ಅವರು ಮೊದಲನೆ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.ನಂತರ ಶಾಲೆಯ ಆವರಣದಲ್ಲಿ ಹಲವಾರು ವಿವಿಧ ರೀತಿಯ ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಅಮರೇಶ,ಪರಿಸರ ಪ್ರೇಮಿ ಮೌನೇಶ ರೈತನಗರ ಕ್ಯಾಂಪ್,ಶಿಕ್ಷಕರಾದ ಮೈನುದ್ದೀನ್, ಚಿತ್ರಶೇಖರ,ರೂಪಾಸಿಂಗ್,ವಿಕ್ರಮ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.