ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಮೇಲೆ ವರ್ಗಾವಣೆ ಧಂಧೆ ಬಗ್ಗೆ ಆರೋಪ ಮಾಡುತ್ತಿರುವ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ಅವರು ಸಾಕ್ಷಿ ಸಮೇತ ಆರೋಪಿಸಬೇಕು ಎಂದು ತಾಜಸುಲ್ತಾನಪುರ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಸುನೀಲ ಮದನಕರ್ ಅವರು ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಆರೋಪಿಸುತ್ತಿದ್ದು,ಈ ಆರೋಪವು ಸಾಬೀತುಪಡಿಸಲು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ಅವರ ಬಳಿ ಸಾಕ್ಷಿಗಳು ಇದ್ದರೆ ಸಾಬೀತುಪಡಿಸಲಿ ಎಂದು ಅವರು ಒತ್ತಾಯಿಸಿದ್ದರು.
ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ ಅವರ ಕೆಲಸ ಕಾರ್ಯಗಳನ್ನು ಸಹಿಸದೇ ಈ ರೀತಿ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದರು.ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಕಾಂಗ್ರೆಸ ಪಕ್ಷವು ಅಭಿವೃದ್ಧಿಯತ್ತ ಮುಂದೆ ಸಾಗುತ್ತಿದ್ದು ಅಭಿವೃದ್ದಿ ಸಹಿಸದೇ ಈ ರೀತಿ ಆರೋಪ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.ಈಗ ಅವರಿಗೆ ಕಾಂಗ್ರೆಸ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.