ದಿ:17.2.2024 ಶನಿವಾರ ಕೂಡ್ಲಿಗಿ ಪಟ್ಟಣದ ಪ್ರವಾಸ ಮಂದಿರದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ.ಶ್ರೀನಿವಾಸ್ ಎನ್ ಟಿ ರವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ಜರುಗಿತು.
ಸಭೆಯಲ್ಲಿ ಬರಗಾಲದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕೈಗೊಳ್ಳ ಬೇಕಾಗಿರುವ ಪ್ರಮುಖವಾದ ಕುಡಿಯುವ ನೀರಿನ ಸಮಸ್ಯೆ ಜಾನುವಾರುಗಳಿಗೆ ಮೇವಿನ ಸಮಸ್ಯೆ, ವಿದ್ಯುತ್ ಹಾಗೂ ಜನರಿಗೆ ಎನ್ ಆರ್ ಇ ಜಿ ಯೋಜನೆ ಅಡಿಯಲ್ಲಿ ಉದ್ಯೋಗ ಕಲ್ಪಿಸುವ ಕುರಿತು ಚರ್ಚಿಸಲಾಯಿತು.
ಸಭೆಯ ಆರಂಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಶಾಸಕರು ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಅಲ್ಲಿ ಟ್ಯಾಂಕರ್ ಗಳ ಮೂಲಕ ಅಥವಾ ಸಂದರ್ಭಕ್ಕೆ ಅನುಗುಣವಾಗಿ ಕೊಳವೆ ಬಾವಿಗಳನ್ನು ಕೂರೆಸಿ,ಇಲ್ಲವೇ ರೈತರನ್ನು ಮನವೊಲಿಸಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಬಗ್ಗೆ ಹೆಚ್ಚು ಮುತುವರ್ಜಿ ವಹಿಸುವಂತೆ ಖಡಕ್ಕಾಗಿ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕೂಡ್ಲಿಗಿ ಪಟ್ಟಣಕ್ಕೆ ಸಮರ್ಪಕವಾಗಿ ನೀರು ಪೂರೈಕೆ ಮಾಡುವಂತೆ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಗೋಶಾಲೆ ಸಂಬಂಧ & ಮೇವು ಸಂಗ್ರಹಣೆ ಕುರಿತು ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರಿಂದ ಮಾಹಿತಿ ಪಡೆದರು.ಗೋ ಶಾಲೆ ಆರಂಭ ಮಾಡುವ ಸಂಬಂಧ ಗಂಡಬೊಮ್ಮನಹಳ್ಳಿ ಮತ್ತು ಹೊಸಹಳ್ಳಿ ಭಾಗದಲ್ಲಿ ಕೆರೆಗಳ ಪರಿಸ್ಥಿತಿ ಅವಲೋಕನ ಮಾಡಿ ವರದಿ ನೀಡಬೇಕು. ತಾಲೂಕಿನ ರೈತರಿಂದ ಮೇವು ಖರೀದಿಸಬೇಕು & ಗ್ರಾಮ ಪಂಚಾಯಿತಿಯ ಯಾವ ಸ್ಥಳಗಳಲ್ಲಿ ಮೇವು ಸಂಗ್ರಹಣೆ ಮಾಡುವ ಬಗ್ಗೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಅಂಗಡಿ ಶಶಿಕುಮಾರ್