ಕಲಬುರಗಿ:ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಶೂನ್ಯ ಬಜೆಟ್. ಕರ್ನಾಟಕ ರಾಜ್ಯವನ್ನು ಈ ಬಜೆಟ್ 20 ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗಿದೆ.ಇದು ಅಭಿವೃದ್ಧಿಗೆ ವಿರೋಧ ಆಗಿದೆ.ಅಭಿವೃದ್ಧಿಗೆ ಹಣ ನೀಡಿಲ್ಲ ರೈತರ ಬಡವರ ಹಾಗೂ ಅಭಿವೃದ್ಧಿಯ ವಿರೋಧಿಯಾಗಿದೆ” ಎಂದು ಅವರು ಟೀಕಿಸಿದರು.ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ.ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಮಾಡಲಾಗಿದೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್ ಇದಾಗಿದೆ ಎಂದರು.
ಭಾಗ್ಯಗಳನ್ನು ಪೂರೈಸಲು ಬೊಕ್ಕಸ ತುಂಬಿಸುವ ಪ್ರಯತ್ನದಲ್ಲಿ ಬಜೆಟ್ ಸಿದ್ದಪಡಿಸಲಾಗಿದೆ. ನಿಷ್ಠುರ ತೆರಿಗೆ ಸಂಗ್ರಹದ ಆಲೋಚನೆಯಲ್ಲಿ ಸರ್ಕಾರವು ಅಬಕಾರಿ ಮತ್ತು ಮುದ್ರಾಂಕ ಶುಲ್ಕವನ್ನು ಹೆಚ್ಚಿಸಿದೆ. ಕೃಷಿ ಕೈಗಾರಿಕೆ ಮತ್ತು ಕಲ್ಯಾಣ ಕರ್ನಾಟಕದ ಕನಸಿನಲ್ಲಿರುವ ಸರ್ಕಾರಕ್ಕೆ ಸಾಲ ಮರುಪಾವತಿಯ ಜವಾಬ್ದಾರಿಯನ್ನು ನಿಭಾಯಿಸುವ ಗುರುತರ ಹೊಣೆಯು ಜೋಡೆತ್ತಿನ ಹೆಗಲ ಮೇಲಿದೆ. ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಬಹುಸಂಖ್ಯಾತರನ್ನು ಕಡೆಗಣಿಸಲಾಗಿದೆ.ಸರ್ಕಾರ ಎಲ್ಲದನ್ನೂ ಉಚಿತವಾಗಿ ನೀಡುವುದರ ಬದಲಾಗಿ ಎಲ್ಲರಿಗೂ ಉದ್ಯೋಗದ ಖಚಿತತೆ ನೀಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತಿತ್ತು ಎಂದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.