ಯಡ್ರಾಮಿ ತಾಲೂಕಿನ ಹಲವಾರು ಹಳ್ಳಿಗಳಲ್ಲಿ ಕುಡಿಯಲು ನೀರು ಸಿಗದೇ ಇದ್ದರು ಸಾರಾಯಿಗೆ ಮಾತ್ರ ಬರವಿಲ್ಲವೆಂದೇ ಹೇಳಬಹುದು! ಅನಧಿಕೃತವಾಗಿ ಕಾನೂನು ಬಾಹಿರವಾಗಿ ಯಡ್ರಾಮಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಅನಧಿಕೃತ ಸಾರಾಯಿ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ.ಇದಕ್ಕೆ ಕಡಿವಾಣ ಹಾಕಬೇಕಾದ ಅಬಕಾರಿ ಇಲಾಖೆಯ ಅಧಿಕಾರಿಗಳು ಕಣ್ಣು ಮುಚ್ಚಿ ಮಲಗಿರುವಂತೆ ಕಾಣುತ್ತಿದೆ ಯಾಕಂದ್ರೆ ಎಷ್ಟೋ ಕುಟುಂಬಗಳು ನಕಲಿ ಸಾರಾಯಿ ದುಶ್ಚಟಕ್ಕೆ ಬಲಿಯಾಗಿ ಲಿವರ್ ಹಾಗೂ ಕಿಡ್ನಿ ಡ್ಯಾಮೇಜ್ ಆಗಿ ಪ್ರಾಣ ಬಿಟ್ಟಿದ್ದಾರೆ ಕೂಲಿ ನಾಲಿ ಮಾಡಿ ಜೀವನ ಸಾಗಿಸುವ ಎಸ್ಟೋ ಕುಟುಂಬಗಳು ಬೀದಿಗೆ ಬಂದಿವೆ ಎನ್ನಬಹುದು ಇದಕ್ಕೆ ಸಂಬಂಧಪಟ್ಟ ಅಬಕಾರಿ ಇಲಾಖೆಯ ಅಧಿಕಾರಿಗಳು ಈ ವರದಿಗೆ ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಅಮಾನತು ಆಗುವವರೆಗೂ ಹೋರಾಟ ಮಾಡಲಾಗುತ್ತದೆ ಹಾಗೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ಕೂಡ ದಾಖಲಾತಿಸಲಾಗುತ್ತದೆ…ಇನ್ನು ಮುಂದಾದರೂ ಅಬಕಾರಿ ಇಲಾಖೆಯವರು ಅನಧಿಕೃತ ಸರಾಯಿ ಮಾರಾಟಕ್ಕೆ ಕಡಿವಣ ಹಾಕುವರೋ ಇಲ್ಲವೋ ಕಾದು ನೋಡಬೇಕಾಗಿದೆ ಒಂದು ವೇಳೆ ನಿರ್ಲಕ್ಷ ವಹಿಸಿದರೆ ಯಡ್ರಾಮಿ ತಾಲೂಕಿನ ದಂಡಾಧಿಕಾರಿಗಳ ಕಾರ್ಯಾಲಯದ ಮುಂದೆ ಉಗ್ರವಾದಂತಹ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಯಡ್ರಾಮಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ತಾಲೂಕ ಅಧ್ಯಕ್ಷರಾದ ಮಾಳು ಕಾರಗೊಂಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.