ಮುಂಬರುವ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್ ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ.ಮಾರ್ಚ್ 2 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು,ಮಾರ್ಚ್ 28 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು,ಏಪ್ರಿಲ್ 19 ರಂದು ಮತದಾನ ನಡೆಯಲಿದೆ.
ಮೇ 22 ರಂದು ಮತ ಎಣಿಕೆ ನಡೆಯಲಿದೆ ಎಂಬ ನಕಲಿ ಸಂದೇಶ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿಕೆ ನೀಡಿರುವ ರಾಜ್ಯ ಚುನಾವಣಾ ಆಯೋಗ, ಭಾರತ ಚುನಾವಣಾ ಆಯೋಗ ಮಾತ್ರ ಚುನಾವಣೆಯ ಕುರಿತು ಪತ್ರಿಕಾಗೋಷ್ಠಿಯನ್ನು ಬಿಡುಗಡೆ ಮಾಡುತ್ತದೆ. ಸುಳ್ಳು ಮಾಹಿತಿಗಳನ್ನು ನಂಬದೆ ಜಾಗೃತರಾಗಿ ಎಂದು ಎಚ್ಚರಿಕೆ ನೀಡಿದೆ.
ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್