ಶಿವಮೊಗ್ಗ:ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ರಾಜಾ ವೆಂಕಟಪ್ಪ ನಾಯಕ ರವರ ನಿಧನಕ್ಕೆ ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ ಸಂತಾಪ ಸೂಚಿಸಿದ್ದಾರೆ.
ರಾಜಾ ವೆಂಕಟಪ್ಪ ನಾಯಕರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.ಅವರ ಆತ್ಮಕ್ಕೆ ಶಾಂತಿ ಲಭಿಸಲಿ.ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ಅನುಗ್ರಹಿಸಲಿ ಎಂದು ಬಿ.ಕೆ ಸಂಗಮೇಶ್ವರ ಕೋರಿದ್ದಾರೆ.
