ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ13 ದಿನಗಳ 3,000 ಕಿಲೋಮೀಟರ್ ಗಳ ಬೈಕ್ ಜಾಥಾ
“ಭ್ರಷ್ಟರನ್ನು,ಅಪ್ರಾಮಾಣಿಕರನ್ನು,ಸ್ವಜನಪಕ್ಷಪಾತಿಗಳನ್ನು,ಅನೈತಿಕ ನಡವಳಿಕೆ ಉಳ್ಳವರನ್ನು,ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು,ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆ.ಸಿ.ಬಿ. ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ತಮ್ಮ ಮತ್ತು ತಮ್ಮ ಮಕ್ಕಳ ರಾಜಕೀಯ ನಾಯಕರೆಂದು ಒಪ್ಪಿಕೊಳ್ಳದೆ ಜನಪರ ಕಾಳಜಿಯ, ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಡಪ್ರೇಮಿ ಸೈನಿಕರನ್ನು ಮತ್ತು KRS ಪಕ್ಷವನ್ನು ಬೆಂಬಲಿಸಿ”ಎಂದು KRS ಪಕ್ಷದ ರಾಜ್ಯಧ್ಯಕ್ಷರಾದ ರವಿ ಕೃಷ್ಣಾರೆಡ್ಡಿರವರು ಜನರಲ್ಲಿ ಮನವಿ ಮಾಡಿದರು.
ದಿನಾಂಕ 19-02-2024 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಪ್ರಾರಂಭವಾದ ಬೈಕ್ ಜಾಥಾ ಚಿಕ್ಕಬಳ್ಳಾಪುರ, ಕೋಲಾರ,ಬೆಂಗಳೂರು ನಗರ,ರಾಮನಗರ,ಮಂಡ್ಯ,ಚಾಮರಾಜನಗರ, ಮೈಸೂರು,ಕೊಡಗು,ಮಂಗಳೂರು,ಉಡುಪಿ,ಉತ್ತರ ಕನ್ನಡ,ಧಾರವಾಡ,ಬೆಳಗಾವಿ,ಬಾಗಲಕೋಟೆ,ವಿಜಯಪುರ,ಬೀದರ್,ಕಲಬುರ್ಗಿ,ಯಾದಗಿರಿ,ರಾಯಚೂರು ಮಾರ್ಗವಾಗಿ ಇಂದು ಬೆಳಗ್ಗೆ 12.00 ಗಂಟೆಗೆ ಸಿಂಧನೂರು ತಲುಪಿತ್ತು.
ಸಿಂಧನೂರು,ಗಾಂಧಿ ವೃತ್ತದಲ್ಲಿ ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ರವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ
ತಮ್ಮ ಭ್ರಷ್ಟಾಚಾರ, ಸ್ವಜನಪಕ್ಷಪಾತ,ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್,ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ರಾಜ್ಯದ ಜನರನ್ನು ಕೋರಲು ಹಾಗೂ ಸ್ವಚ್ಚ, ಪ್ರಾಮಾಣಿಕ,ಜನಪರ,ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಬೈಕ್ ಜಾಥಾ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್.,ನರಸಿಂಹ ಮೂರ್ತಿ,ಜಂಟಿ ಕಾರ್ಯದರ್ಶಿ ರಘುಪತಿ ಭಟ್,ಸಂಘಟನಾ ಕಾರ್ಯದರ್ಶಿ ಎಲ್.ಜೀವನ್, ಚಂದ್ರಶೇಖರ್ ಮಠದ,ಬಿ.ಜಿ ಕುಂಬಾರ್,ರಾಜ್ಯ ಯುವ ಘಟಕದ ಅಧ್ಯಕ್ಷ ನಿರುಪಾದಿ ಗೋಮರ್ಸಿ,ಜಿಲ್ಲಾಧ್ಯಕ್ಷರಾದ ಕುಂದೂರು ರಾಘವೇಂದ್ರ,ಜಿಲ್ಲಾ ಉಪಾಧ್ಯಕ್ಷ ಬಸವ ಪ್ರಭು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಪೊಳ್ ಹಾಗೂ ಇತರ ಪದಾಧಿಕಾರಿಗಳು ಈ ಬೈಕ್ ಜಾಥಾ ದಲ್ಲಿ ಭಾಗವಹಿಸಿದ್ದರು.