ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಲು ಯಮನೂರ ನಾಯಕ ಆಗ್ರಹ

ಕೊಪ್ಪಳ:
ಫೆಬ್ರವರಿ-27 ರಂದು ಕರ್ನಾಟಕದ ವಿಧಾನಸೌಧದಲ್ಲಿ ನಡೆದ ರಾಜ್ಯ ಸಭೆಯ ಚುನಾವಣೆಯ ಫಲಿತಾಂಶದ ನಂತರ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿಯಾದ ನಾಸೀರ ಹುಸೇನ್‌ರವರ ಪರವಾಗಿ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಮೂಲಕ ದೇಶದ್ರೋಹವೆಸಗಿರುವುದು ತೀವ್ರ ಖಂಡನೀಯ ಎಂದು ಯಮನೂರ ನಾಯಕ ಬುನ್ನಟ್ಟಿ ಗ್ರಾಮ ಮತ್ತು ನಗರಸಬಲೀಕರಣ ಸಂಘದಿಂದ ಆಕ್ರೋಷ ವ್ಯಕ್ತಪಡಿಸಿದರು.
ಕರ್ನಾಟಕ ವಿಧಾನಸೌಧದಲ್ಲಿ ನಾಸೀರ್ ಹುಸೇನ್ ರವರ ಗೆಲುವಿನ ಸಂದರ್ಭದಲ್ಲಿ ಭಾರತದ ಕಟ್ಟಾ ವೈರಿ ರಾಷ್ಟ್ರವಾದ ಪಾಕಿಸ್ತಾನದ ಪರವಾಗಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶದ್ರೋಹದ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ಸರ್ಕಾರ ಘೋಷಣೆ ಕೂಗಿದವರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವ ಮೂಲಕ ದೇಶದಿಂದ ಗಡಿಪಾರು ಮಾಡಬೇಕೆಂದು ನಮ್ಮ ಗ್ರಾಮ ಮತ್ತು ನಗರ ಸಬಲೀಕರಣ ಸಂಘ ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ