ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರನಾಗನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗಾಪುರ ಗ್ರಾಮದ ಅಂಗನವಾಡಿ ಕೇಂದ್ರ 61 ರಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿಯ ಸದಸ್ಯರಾದ ಮಹಾಂತೇಶ್ ಜಾಲವಾಡಗಿಯವರು 5 ವರ್ಷದ ಒಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ಮತ್ತು ಆಶಾ ಕಾರ್ಯಕರ್ತೆಯರು,ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ.ನಾಗರಾಜ ಪ್ರಚಂಡಿ




















