ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಯೋಗದ ಮೂಲಕ ವಿಜ್ಞಾನದ ಕಲಿಕೆಯಾಗಲಿ: ಸೋಮಶೇಖರ ಗೌಡ

ಸಿಂಧನೂರು:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಹಂತದಲ್ಲಿ ಮಕ್ಕಳಿಗೆ ಪ್ರಯೋಗದ ಮೂಲಕ ವಿಜ್ಞಾನವನ್ನು ಬೋಧಿಸುವುದರಿಂದ ಹೆಚ್ಚಿನ ಆಸಕ್ತಿಯನ್ನು ಮೂಡಿಸಲು ಸಹಾಯಕವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಗೌಡ ಹೇಳಿದರು.
ಅವರು ಗುರುವಾರದಂದು ನಗರದ ಆದರ್ಶ ವಿದ್ಯಾಲಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ರಾಯಚೂರು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂಧನೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಶಿಕ್ಷಕರಿಗಾಗಿ ವಿಜ್ಞಾನ ತರಬೇತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳಿಗೆ ಪ್ರಾಯೋಗಿಕ ವಿಧಾನದ ಮೂಲಕ ವಿಜ್ಞಾನ ವಿಷಯವನ್ನು ಬೋಧಿಸಿದರೆ ಮಾತ್ರ ಈ ವಿಷಯ ಪೂರ್ಣವಾಗಿ ಅರ್ಥಮಾಡಿಕೊಳ್ಳಬಹುದು.ಇತ್ತೀಚಿನ ದಿನಗಳಲ್ಲಿ ಮೂಲ ವಿಜ್ಞಾನ ವಿಷಯಗಳ ಅಧ್ಯಯನದ ಆಯ್ಕೆಯ ಕೊರತೆಯನ್ನು ಕಾಣುತ್ತಿದ್ದೇವೆ.ಇದರಿಂದ ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಬಹಳಷ್ಟು ತೊಂದರೆಯನ್ನು ಅನುಭವಿಸಬೇಕಾಗುತ್ತದೆ ಆದ್ದರಿಂದ ಉಪನ್ಯಾಸಕರು,ಶಿಕ್ಷಕರು ಮಕ್ಕಳಲ್ಲಿ ಮೂಲ ವಿಜ್ಞಾನ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಅಧ್ಯಯನವನ್ನು ಮಾಡಲು ಸಲಹೆ ನೀಡಬೇಕೆಂದು ಹೇಳಿದರು.
ಇಲಕಲ್ಲಿನ ಎಸ್‌ವಿಎಂ ಕಾಲೇಜಿನ ಉಪನ್ಯಾಸಕ ಡಾ.ಪ್ರಶಾಂತ್ ಆದರೆಡ್ಡಿ ಪರಿಸರ ವಿಜ್ಞಾನದ ಕುರಿತು ಮಾತನಾಡಿ,ಪರಿಸರ ಮಾಲಿನ್ಯ ಅದರ ಪರಿಣಾಮ ಮತ್ತು ನಮ್ಮ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳು , ಜಾಗತಿಕ ತಾಪಮಾನ ಸೇರಿದಂತೆ ವಿಷಯಗಳು ಮಾಹಿತಿ ನೀಡಿದರು.
ಇಲಕಲ್ಲಿನ ಎಸ್‌ವಿಎಂ ಕಾಲೇಜಿನ ಇನ್ನೋರ್ವ ಉಪನ್ಯಾಸಕ ಡಾ.ಪಿ ಎಸ್ ಕಂದಗಲ್ ಮಾತನಾಡಿ, ರಸಾಯನಶಾಸ್ತ್ರ ವಿಷಯದ ಬೋಧನೆಗೆ ಸೂಕ್ತ ಪ್ರಯೋಗಾಲಯವನ್ನು ಸಿದ್ಧಪಡಿಸಿಕೊಳ್ಳಬೇಕು.ಸಣ್ಣ -ಸಣ್ಣ ಪ್ರಯೋಗಗಳನ್ನು ಮಾಡುವ ಮೂಲಕ ಮಕ್ಕಳಲ್ಲಿ ವಿಜ್ಞಾನ ವಿಷಯದ ಕುರಿತು ಆಸಕ್ತಿಯನ್ನು ಮೂಡಿಸಬೇಕೆಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಪ್ರಭಾರ ಮುಖ್ಯ ಗುರು ಮಲ್ಲಪ್ಪ ಕೆ ವಹಿಸಿದ್ದರು.ವೇದಿಕೆ ಮೇಲೆ ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ,ನೋಡಲ್ ಅಧಿಕಾರಿ ರವಿ ಪವಾರ್,ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾದ ಕೆಬಿ ಹವಾಲ್ದಾರ್,ಪ್ರೌಢಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದುರ್ಗಾ ಪ್ರಸಾದ್,ವಿಜ್ಞಾನ ವಿಷಯ ವೇದಿಕೆಯ ಮಲ್ಲಿಕಾರ್ಜುನ್ ಜೆಟ್ಟೇರ,ಬಿ ಆರ್ ಪಿ ಹುಲುಗಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ